Breaking News

ಕಲಘಟಗಿ | ಬಿಡಾಡಿ ದನ, ನಾಯಿಗಳ ಹಾವಳಿ ಹೆಚ್ಚಳ

Spread the love

ಲಘಟಗಿ: ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳು ಹಾಗೂ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರಿಗೆ ತೊದರೆಯಾಗುತ್ತಿದೆ.

ಪಟ್ಟಣದ ವ್ಯಾಪ್ತಿಯಲ್ಲಿ 17 ವಾರ್ಡ್‌ಗಳಿವೆ. ಗಾಂಧಿನಗರ, ಮಾರುಕಟ್ಟೆ, ಬಸ್ ನಿಲ್ದಾಣ, ಎಪಿಎಂಸಿ, ಆಂಜನೇಯ ವೃತ್ತ, ಜೋಳದ ಓಣಿ, ಯುವ ಶಕ್ತಿ ವೃತ್ತ ಸೇರಿದಂತೆ ಕೆಲವು ಸರ್ಕಾರಿ ಕಚೇರಿ ಆವರಣದಲ್ಲಿ ಬೀದಿ ನಾಯಿಗಳು ಹಾಗೂ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದೆ.

ಕಲಘಟಗಿ | ಬಿಡಾಡಿ ದನ, ನಾಯಿಗಳ ಹಾವಳಿ ಹೆಚ್ಚಳ

ರಸ್ತೆ ಮಧ್ಯೆ ದನಗಳು ಸದಾ ಮಲಗಿರುತ್ತವೆ. ಹೀಗಾಗಿ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಇನ್ನೊಂದೆಡೆ ಕೆಲವು ದನಗಳು ಅಂಗಡಿಗಳ ಹೊರಗೆ ಇಟ್ಟಿದ್ದ ವಸ್ತುಗಳನ್ನು ತಿಂದು ಹಾನಿ ಮಾಡುತ್ತಿವೆ.

ಬೀದಿ ನಾಯಿಗಳ ಹಾವಳಿ: ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿಯಿಂದಾಗಿ ಜನರು ಸಂಚರಿಸಲು ಭಯ ಪಡುವ ಸ್ಥಿತಿ ನಿರ್ಮಾಣವಾಗಿದೆ.

‘ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಅವುಗಳನ್ನು ಹಿಡಿದು ಬೇರೆಡೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು’ ಎಂದು ಪಟ್ಟಣದ ಮುಖಂಡ ಆಜಾದ್ ಮಲ್ಲಿಕನವರ ಒತ್ತಾಯಿಸಿದರು.


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ