Breaking News

ಚಂದ್ರಶೇಖರ​ ಗುರೂಜಿ ಕೊಲೆ ಕೇಸ್‌: ಆರೋಪಿಯ ಜಾಮೀನು ಅರ್ಜಿ ವಜಾ

Spread the love

ಬೆಂಗಳೂರು : ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಮಹಾಂತೇಶ ಶಿರೂರು ಜಾಮೀನು ಅರ್ಜಿ ಸಲ್ಲಿಸಿದ್ದ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಜಾಮೀನು ಅರ್ಜಿಯನ್ನು ವಜಾ ಗೊಳಿಸಿತು.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ರಾಚಯ್ಯ ಅವರು ಆರೋಪಿಯ ಅರ್ಜಿ ವಜಾಗೊಳಿಸಿ ಅದೇಶಿಸಿದ್ದಾರೆ.ಹಳೆಯ ದ್ವೇಷದಿಂದ ಅರ್ಜಿದಾರ ಆರೋಪಿ ಚಂದ್ರಶೇಖರ ಗುರೂಜಿಯನ್ನು ಹತ್ಯೆ ಮಾಡಿದ್ದಾರೆ.

ಹತ್ಯೆ ಮಾಡಿರುವ ರೀತಿ ನೋಡಿದರೆ, ಗುರೂಜಿ ಮೇಲೆ ಆರೋಪಿ ಎಷ್ಟು ದ್ವೇಷ ಬೆಳೆಸಿಕೊಂಡಿದ್ದ ಎನ್ನುವುದನ್ನು ಸೂಚಿಸುತ್ತದೆ.

ಸಮಾಜ ಓರ್ವ ವ್ಯಕ್ತಿಯಿಂದ ಜವಾಬ್ದಾರಿ ಹಾಗೂ ಹೊಣೆಗಾರಿಕೆಯನ್ನು ನಿರೀಕ್ಷಿಸುತ್ತದೆ. ಪ್ರಜೆ ಕಾನೂನು ಪಾಲಿಸಬೇಕಾಗುತ್ತದೆ. ಸಮಾಜದ ನಿಯಮಗಳಿಗೆ ಗೌರವ ತೋರಿಸಬೇಕಾಗುತ್ತದೆ. ಅರ್ಜಿದಾರ ಚಂದ್ರಶೇಖರ ಗುರೂಜಿಯನ್ನು ಕೊಲೆ ಮಾಡಿರುವುದು ಪ್ರತ್ಯಕ್ಷದರ್ಶಿಗಳ ಸಾಕ್ಷ್ಯ ಮತ್ತು ದಾಖಲೆಗಳಿಂದ ತಿಳಿದುಬರುವ ಕಾರಣ ಜಾಮೀನು ಪಡೆಯಲು ಮಹಂತೇಶ್ ಅರ್ಹನಾಗಿಲ್ಲ ಎಂದು ಕೋರ್ಟ್‌ ಆದೇಶದಲ್ಲಿ ನ್ಯಾಯಪೀಠ ಹೇಳಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ