Breaking News

ಕೃಷ್ಣಾ ನದಿಗೆ ಟ್ರ್ಯಾಕ್ಟರ್ ಪಲ್ಟಿ: ಕೊಚ್ಚಿ ಹೋದ 8 ಜನರಲ್ಲಿ ಇಬ್ಬರು ನಾಪತ್ತೆ

Spread the love

ಕೃಷ್ಣಾ ನದಿಗೆ ಟ್ರ್ಯಾಕ್ಟರ್ ಪಲ್ಟಿ: ಕೊಚ್ಚಿ ಹೋದ 8 ಜನರಲ್ಲಿ ಇಬ್ಬರು ನಾಪತ್ತೆ

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಶಿರೋಳ ತಾಲೂಕಿನ ಅಕ್ಕಿವಾಟ್ -ಬಸ್ತವಾಡ್ ರಸ್ತೆಯಲ್ಲಿ ಸಾಗುತ್ತಿದ್ದ ಟ್ರ್ಯಾಕ್ಟರ್ ಆಕಸ್ಮಿಕವಾಗಿ ಕೃಷ್ಣಾ ನದಿಯ ಪ್ರವಾಹದಲ್ಲಿ ಪಲ್ಟಿಯಾಗಿ ಇಬ್ಬರು ನಾಪತ್ತೆಯಾಗಿರುವ ಘಟನೆ ಆ.2 ರಂದು(ಶುಕ್ರವಾರ ) ನಡೆದಿದೆ.

Chikkodi; ಕೃಷ್ಣಾ ನದಿಗೆ ಟ್ರ್ಯಾಕ್ಟರ್ ಪಲ್ಟಿ: ಕೊಚ್ಚಿ ಹೋದ 8 ಜನರಲ್ಲಿ ಇಬ್ಬರು ನಾಪತ್ತೆ

ಅಕ್ಕಿವಾಟ್ , ಗ್ರಾಮಕ್ಕೆ ಕುಡಿಯುವ ನೀರು ಒದಗಿಸುವ ಸಲುವಾಗಿ ಮೋಟಾರ್ ಸ್ಟಾರ್ಟ್ ಮಾಡಲೆಂದು ಅಕ್ಕಿವಾಟ್ – ಬಸ್ತವಾಡ್ ರಸ್ತೆಯಿಂದ ತೆರಳುತ್ತಿದ್ದ ಟ್ರ್ಯಾಕ್ಟರ್‌ ನಲ್ಲಿ ಒಟ್ಟು 8 ಮಂದಿ ಇದ್ದರು ಎನ್ನಲಾಗಿದೆ. ಈ ವೇಳೆ ಕೃಷ್ಣಾ ನದಿಯಲ್ಲಿ ಉಂಟಾದ ಮಹಾಪೂರದಿಂದ ನೀರಿನ ಹರಿವಿಗೆ ಎಲ್ಲರೂ ಕೊಚ್ಚಿ ಹೋಗಿದ್ದಾರೆ.

ಈ ಘಟನೆಯ ಬಗ್ಗೆ ತಿಳಿದ ತತ್‌ ಕ್ಷಣ ತಾಲೂಕು ಆಡಳಿತವು ಯಾಂತ್ರಿಕ ದೋಣಿ ಮೂಲಕ ವಿಪತ್ತು ನಿರ್ವಹಣಾ ಸಿಬಂದಿಯ ಸಹಾಯದಿಂದ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು,8 ಮಂದಿಯ ಪೈಕಿ ಆರು ಮಂದಿಯನ್ನು ರಕ್ಷಿಸಿದ್ದಾರೆ .ಇನ್ನಿಬ್ಬರು ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ