Breaking News

ಆದಾಯಕ್ಕಿಂತ ಅಧಿಕ ಆಸ್ತಿ: ಯಾದಗಿರಿ ಡಿಎಚ್‌ಒ ಅಮಾನತು

Spread the love

ಯಾದಗಿರಿ: ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪ್ರಭುಲಿಂಗ ಮಾನಕರ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಡಳಿತಾಧಿಕಾರಿ ಅಮಾನತು ಮಾಡಿ ಆದೇಶಿಸಿದ್ದಾರೆ.

ಪ್ರಭುಲಿಂಗ ಅವರು ₹1.40 ಕೋಟಿ ಮೌಲ್ಯದ ಅಕ್ರಮ ಆಸ್ತಿ ಹೊಂದಿರುವುದನ್ನು ಲೋಕಾಯುಕ್ತ ಪೊಲೀಸ್‌ ಪತ್ತೆ ಹಚ್ಚಿದ್ದರು.

ಹೀಗಾಗಿ ನಿಷ್ಪಕ್ಷಪಾತ ತನಿಖೆಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ. ಕಲಬುರಗಿ ಜಿಲ್ಲೆಯ ಅಳಂದ ಸಾರ್ವಜನಿಕ ಆಸ್ಪತ್ರೆಗೆ ಲೀನ್ ವರ್ಗಾವಣೆ ಮಾಡಲಾಗಿದೆ.

2023ರ ಡಿಸೆಂಬರ್‌ 5ರಂದು ಡಾ.ಪ್ರಭುಲಿಂಗ ಅವರ ಯಾದಗಿರಿ ಬಾಡಿಗೆ ಮನೆ ಮೇಲೆ, ಕಚೇರಿ, ಕಲಬುರಗಿಯಲ್ಲಿ ಲೋಕಾಯುಕ್ತ ಪೊಲೀಸರು ಶೋಧ ಮಾಡಿದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ