Breaking News

ಕೆಎಸ್‌ಆರ್ ಟಿಸಿ ಬಸ್ ಅಡಿ ಸಿಲುಕಿ ಬೈಕ್ ಸವಾರ ಸಾವು

Spread the love

ತುಮಕೂರು: ನಗರದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಬೈಕ್ ಸವಾರ ಬಸ್ ಗೆ ಸಿಲುಕಿ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.

ಮೃತ ವ್ಯಕ್ತಿ ತುಮಕೂರು ನಗರದ ಚೇತನ ಬಡಾವಣೆ ನಿವಾಸಿ ಚಂದ್ರಶೇಖರ್ (49) ಎಂದು ಗುರುತಿಸಲಾಗಿದೆ.

ಚಂದ್ರಶೇಖರ್ ಅವರು ಬಟವಾಡಿ ಕಡೆಯಿಂದ ಮಹಾತ್ಮ ಗಾಂಧಿ ಸ್ಟೇಡಿಯಂ ಕಡೆಗೆ ಹೋಗುತ್ತಿದ್ದ ವೇಳೆ ಬಸ್‌ಗೆ ಡಿಕ್ಕಿಯಾಗಿ ಅದರಡಿ ಸಿಲುಕಿ ಗಂಭೀರ ಗಾಯಗೊಂಡಿದ್ದರು.

 

ಗಾಯಗೊಂಡ ಚಂದ್ರಶೇಖರ್‌ ರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಬಳಿಕ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾರೆ.

ಈ ಸಂಬಂಧ ನಗರದ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ