Breaking News

10 ಮಹಾನಗರ ಪಾಲಿಕೆ ಕಾರ್ಯ ಸ್ಥಗಿತ: ನಾಳೆ ಪಾಲಿಕೆ ನೌಕರರ ಸಭೆ

Spread the love

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನೀಡಲಾಗುತ್ತಿರುವ ಆರೋಗ್ಯ ಸೌಲಭ್ಯವನ್ನು ಮಹಾನಗರ ಪಾಲಿಕೆ ನೌಕರರಿಗೂ ವಿಸ್ತರಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮುಂದಿನ ಹೋರಾಟ ಕುರಿತು ಚರ್ಚಿಸಲು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ಮಂಗಳವಾರ(ಆ.6) ಖಾಸಗಿ ಹೋಟೆಲ್​ನಲ್ಲಿ ತುರ್ತು ಸಭೆ ಆಯೋಜಿಸಿದೆ.

10 ಮಹಾನಗರ ಪಾಲಿಕೆ ಕಾರ್ಯ ಸ್ಥಗಿತ: ನಾಳೆ ಪಾಲಿಕೆ ನೌಕರರ ಸಭೆ

ವೃಂದ ಮತ್ತು ನೇಮಕಾತಿ(ಸಿ ಆಯಂಡ್​ ಆರ್​) ನಿಯಾಮವಳಿಗೆ ತಿದ್ದುಪಡಿ, ಪಾಲಿಕೆ ನೌಕರರಿಗೆ ‘ಕರ್ನಾಟಕ ಆರೋಗ್ಯ ಸಂಜೀವಿನಿ’ ಆರೋಗ್ಯ ಸೌಲಭ್ಯ, ಕೆಜಿಐಡಿ ಮತ್ತು ಜಿಪಿಎಸ್​ ಯೋಜನೆ ಅನುಷ್ಠಾನ, ಕ್ರೀಡಾಕೂಟಕ್ಕೆ ಅನುಮತಿ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ನಗರಾಭಿವೃದ್ಧಿ ಸಚಿವರಿಗೆ, ಕಾರ್ಯದರ್ಶಿಗೆ ಭೇಟಿ ಮಾಡಿ ಸಾಕಷ್ಟು ಮನವಿ ಸಲ್ಲಿಸಿದ್ದರೂ ಈವರೆಗೆ ಪ್ರಯೋಜನವಾಗಿಲ್ಲ. ಹಾಗಾಗಿ, 10 ಮಹಾನಗರ ಪಾಲಿಕೆ ಕಾರ್ಯಗಳನ್ನು ಸಂಪೂರ್ಣವಾಗಿ ಬಂದ್​ ಮಾಡುವ ಕುರಿತು ಚರ್ಚಿಸಲು ಸಭೆ ನಡೆಸಲಾಗುವುದು ಎಂದು ಸಂದ ಅಧ್ಯಕ್ಷ ಎ. ಅಮೃತ್​ರಾಜ್​ ಪ್ರಕಟಣೆ ಹೊರಡಿಸಿದ್ದಾರೆ.

ಮೈಸೂರು, ದಾವಣಗೆರೆ, ಹುಬ್ಬಳಿ-ಧಾರವಾಡ, ಬೆಳಗಾವಿ, ಬಳ್ಳಾರಿ, ಕಲಬುರಗಿ, ಶಿವಮೊಗ್ಗ, ವಿಜಯಪುರ ಮತ್ತು ತುಮಕೂರು ಸೇರಿ ರಾಜ್ಯದ 10 ಮಹಾನಗರ ಪಾಲಿಕೆಯಲ್ಲಿ ನೌಕರರು, ಪೌರಕಾರ್ಮಿಕರು ಸೇರಿ ಅಂದಾಜು 2 ಲಕ್ಷ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತಿನಿತ್ಯ ತೆರಿಗೆ ವಸೂಲಾತಿ, ಸ್ವಚ್ಛತೆ, ನಗರ ಅಭಿವೃದ್ಧಿ ಕಾಮಗಾರಿಗಳು, ಸಾರ್ವಜನಿಕರಿಗೆ ಮೂಲಸೌಕರ್ಯ ಒದಗಿಸುವ ಸೇರಿ ಆಡಳಿತಾತ್ಮಕ ಕಾರ್ಯ ಮಾಡುತ್ತಿದ್ದಾರೆ. ಕೆಲಸದ ಒತ್ತಡದಿಂದ ಮಾನಸಿಕ, ದೈಹಿಕವಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದ್ದರಿಂದ, ನೌಕರರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ ಅನ್ವಯವಾಗುವಂತೆ ಆರೋಗ್ಯ ಸಂಜೀವಿನಿ ಯೋಜನೆ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ