Breaking News

ಕಾಳಜಿ ಕೇಂದ್ರಗಳಲ್ಲಿ ಮಕ್ಕಳಿಗೆ ಪಾಠ

Spread the love

ಮೂಡಲಗಿ : ತಾಲ್ಲೂಕಿನಲ್ಲಿ ಘಟಪ್ರಭಾ ನದಿಯ ಪ್ರವಾಹ ಪೀಡಿತ ಗ್ರಾಮಗಳ ಸಂತ್ರಸ್ತರಿಗೆ ವ್ಯವಸ್ಥೆ ಮಾಡಲಾದ 12 ಕಾಳಜಿ ಕೇಂದ್ರಗಳಲ್ಲಿ 350ಕ್ಕೂ ಹೆಚ್ಚು ಮಕ್ಕಳಿದ್ದಾರೆ. ಅಲ್ಲಿ ಲಭ್ಯವಿರುವ ಸೌಲಭ್ಯ ಬಳಸಿಕೊಂಡು, ಶಿಕ್ಷಕರು ಮಕ್ಕಳಿಗೆ ಪಾಠ ಮಾಡುತ್ತಾರೆ.

ವಡೇರಹಟ್ಟಿ, ಪಟಗುಂದಿ, ಮಸಗುಪ್ಪಿ, ಹುಣಶ್ಯಾಳ ಪಿಜಿ ಹೀಗೆ ಬೇರೆ ಬೇರೆ ಕಡೆಯಿರುವ ಕಾಳಜಿ ಕೇಂದ್ರಗಳಲ್ಲಿ ಸಂತ್ರಸ್ತರು ಇದ್ದಾರೆ.‌ ‘ಉಪಾಹಾರ, ಊಟ ಸಿಗುತ್ತಿದೆ. ಸಂತ್ರಸ್ತರ ಮಕ್ಕಳಿಗೆ ಶಿಕ್ಷಣವೂ ನೀಡಬೇಕು ಎಂಬ ಉದ್ದೇಶದಿಂದ ನಿತ್ಯವೂ ಪಾಠ ಮಾಡುತ್ತಿದ್ದೇವೆ’ ಎಂದು ಮೂಡಲಗಿ ಶೈಕ್ಷಣಿಕ ವಲಯದ ಶಿಕ್ಷಕರು ಹೇಳುತ್ತಾರೆ.

‘ಕಾಳಜಿ ಕೇಂದ್ರಗಳಲ್ಲಿ ಪಾಲಕರನ್ನು ಪೀಡಿಸುವ ಅಥವಾ ಸಮಯ ವ್ಯರ್ಥ ಮಾಡುವ ಬದಲು ಮಕ್ಕಳು ಕಲಿಕೆಯಲ್ಲಿ ತೊಡಗಲಿ ಎಂಬ ಕಾಳಜಿ ನಮ್ಮದು. ಶಿಕ್ಷಕರು ಆಸಕ್ತಿಯಿಂದ ಪಾಠ ಮಾಡಿ, ಮಕ್ಕಳು ಶಿಕ್ಷಣದಿಂದ ವಂಚಿತರು ಆಗದಂತೆ ನೋಡಿಕೊಳ್ಳುತ್ತಿದ್ದಾರೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್ ಮನ್ನಿಕೇರಿ ‘ಪ್ರಜಾವಾಣಿ’ಗೆ ತಿಳಿಸಿದರು.

‘ಬೆಳಿಗ್ಗೆ 10 ರಿಂದ ಮಧ್ಯಾಹ್ನ 2ರವರೆಗೆ ಕಾಳಜಿ ಕೇಂದ್ರಗಳಲ್ಲಿನ ಮಕ್ಕಳನ್ನು ಒಂದೆಡೆ ಸೇರಿಸಿ, ಶಿಕ್ಷಕರು ಪಾಠ ಮಾಡುವರು, ಮಕ್ಕಳು ಆಸಕ್ತಿಯಿಂದ ಕಲಿಯುತ್ತಿದ್ದಾರೆ. ಅವರ ಪೋಷಕರು ಕೂಡ ಖುಷಿಯಾಗಿದ್ದಾರೆ’ ಎಂದು ವಡೇರಹಟ್ಟಿಯ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ (ಸಿಆರ್‌ಪಿ) ಆನಂದ ಹಮ್ಮನವರ ತಿಳಿಸಿದರು.

‘ಕಾಳಜಿ ಕೇಂದ್ರದಲ್ಲಿ ಮಕ್ಕಳ ಉತ್ಸಾಹ ಹೆಚ್ಚಾಗಿದೆ. ಅವರು ಸಮಯ ವ್ಯರ್ಥ ಮಾಡುವುದು ತಪ್ಪಿದೆ’ ಎಂದು ಹುಣಶ್ಯಾಳ ಪಿಜಿಯ ಕಾಳಜಿ ಕೇಂದ್ರದ ಸಂತ್ರಸ್ತೆ ಮಹಾದೇವಿ ಕುರಬೇಟ ಹೇಳಿದರು.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ