Breaking News

ವೇಮನರ ತತ್ವ ಜಗತ್ತಿಗೆ ಮಾದರಿ: ಸಚಿವ ಎಚ್.ಕೆ.ಪಾಟೀಲ

Spread the love

ಲೋಕಾಪುರ: ವೇಮನರ ತತ್ವ, ಸಿದ್ಧಾಂತಗಳು ಜಗತ್ತಿಗೆ ಮಾದರಿಯಾಗಿವೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಹೇಳಿದರು.

ಸಮೀಪದ ಮೆಟಗುಡ್ಡ ಗ್ರಾಮದಲ್ಲಿ ಹೇಮರಡ್ಡಿ ಮಲ್ಲಮ್ಮ ದೇವಸ್ಧಾನ ಹಾಗೂ ಹೇಮ ವೇಮ ಸಭಾಭವನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ವೇಮನರ ತತ್ವ ಜಗತ್ತಿಗೆ ಮಾದರಿ: ಸಚಿವ ಎಚ್.ಕೆ.ಪಾಟೀಲ

ರಚನಾತ್ಮಕ ಕೆಲಸಗಳನ್ನು ಮಾಡುವುದರಿಂದ ಒಳ್ಳೆ ಸಮಾಜ ನಿರ್ಮಾಣ ಸಾಧ್ಯ ಎಂದರು.

ಸಚಿವ ಆರ್.ಬಿ.ತಿಮ್ಮಾಪೂರ ಮಾತನಾಡಿ, ಹೇಮರಡ್ಡಿ ಮಲ್ಲಮ್ಮ ಅವರ ವಚನ ಮತ್ತು ಬದುಕನ್ನು ನಾಡಿಗೆ ತಿಳಿಸುವ ಕಾರ್ಯ ನಡೆಯಬೇಕು. ಸಮುದಾಯಗಳ ಮಧ್ಯೆ ಸಮನ್ವಯ ಇದ್ದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದರು.

ಸಮುದಾಯ ಭವನ ನಿರ್ಮಾಣಕ್ಕೆ ₹10 ಲಕ್ಷ ಅನುದಾನ ನೀಡುವುದಾಗಿ ಸಚಿವ ತಿಮ್ಮಾಪೂರ ಭರವಸೆ ನೀಡಿದರು.

ಸಂಸದ ಗೋವಿಂದ ಕಾರಜೋಳ ಮಾತನಾಡಿ, ಸಮುದಾಯ ಭವನವನ್ನು ಸದುಪಯೋಗಪಡಿಕೊಳ್ಳಬೇಕು ಎಂದರು.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ