ಬೆಂಗಳೂರು: ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಚರಕ ಆಸ್ಪತ್ರೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೌರಿಂಗ್ ಆಸ್ಪತ್ರೆಯ ಡೆಂಗಿ ವಾರ್ಡ್‌ಗಳಿಗೆ ಭೇಟಿ ನೀಡಿ, ರೋಗಿಗಳ ಆರೋಗ್ಯ, ದೊರೆಯುತ್ತಿರುವ ಸೌಲಭ್ಯಗಳ ಬಗ್ಗೆ ವಿಚಾರಿಸಿದರು.
ಆಸ್ಪತ್ರೆ ಯಲ್ಲಿ ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿ ದ್ದಾರೆಯೆ? ಬೆಳಗಿನ ಉಪಾಹಾರ, ಮಧ್ಯಾಹ್ನದ ಊಟ ಸಮಯಕ್ಕೆ ಸರಿಯಾಗಿ ನೀಡುತ್ತಿದ್ದಾರೆಯೆ? ಎಂದು ರೋಗಿಗಳಿಂದ ಮಾಹಿತಿ ಪಡೆದುಕೊಂಡರು.
ಬಳಿಕ ಅಲ್ಲಿಂದ ಶಿವಾಜಿನಗರದ ಚರಕ ಆಸ್ಪತ್ರೆಗೆ ಕಾಲ್ನಡಿಗೆಯಲ್ಲಿ ತೆರಳಿ, ಪರಿಶೀಲನೆ ನಡೆಸಿದರು.