ಬೆಳಗಾವಿ: ತಾಲೂಕಿನ ನಾವಗೆ ಕ್ರಾಸ್ ನಲ್ಲಿರುವ ಸ್ನೇಹಂ ಟೇಪಿಂಗ್ ಆಯಂಡ್ ಸೋಲ್ಯೂಶನ್ ಎಂಬ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ ಸ್ಥಳಕ್ಕೆ ಬುಧವಾರ ರಾತ್ರಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿ ಪರಿಶೀಲಿಸಿದರು.
ಕಾರ್ಖಾನೆಯಲ್ಲಿ ಅವಘಡ ಸಂಭವಿಸಿದ್ದು ಹೇಗೆ, ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಬೆಂಕಿ ತಗುಲಲುಬಕಾರಣ ಏನು ಎಂಬುದರ ಬಗ್ಗೆ ಮಾಹಿತಿ ಪಡೆದುಕೊಂಡರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೊಲೀಸ್ ಕಮೀಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಪಂ ಸಿಇಒ ರಾಹುಲ್ ಶಿಂಧೆ ಮಾಹಿತಿ ನೀಡಿದರು.