ಬೆಂಗಳೂರು: ಮುಡಾ ಸೈಟ್ ಹಂಚಿಕೆ ಹಗರಣದಲ್ಲಿ (MUDA Scam) ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯಗೆ (CM Siddaramaiah) ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೋರ್ಟ್‌ನಲ್ಲಿ ಖಾಸಗಿ ದೂರು ದಾಖಲಾಗಿದೆ.
ಬೆಂಗಳೂರಿನ (Bengaluru) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮೈಸೂರಿನ (Mysore) ಸ್ನೇಹಮಯಿ ಕೃಷ್ಣ ಎಂಬುವರು ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ದಾಖಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ದ ತನಿಖೆಗೆ ಆದೇಶ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿಯಲ್ಲಿ ಕೋರ್ಟ್‌ಗೆ (Court) ಮನವಿ ಮಾಡಿದ್ದಾರೆ. ಮತ್ತೊಂದೆಡೆ ಹಳೆಯ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ಗೆ (DCM DK Shivakumar) ಕೋರ್ಟ್ ಸಮನ್ಸ್ (Court Summons) ಜಾರಿಗೊಳಿಸಿದೆ.
ಸಿದ್ದರಾಮಯ್ಯ ಬಾಮೈದನ ಹೆಸರಲ್ಲಿ ಸುಳ್ಳು ದಾಖಲೆ ಸೃಷ್ಟಿ
ಇನ್ನು ಸಿಎಂ ಸಿದ್ದರಾಮಯ್ಯ ವಿರುದ್ಧ ಕೋರ್ಟ್‌ಗೆ ದೂರು ನೀಡಿರುವ ಮೈಸೂರಿನ ಸ್ನೇಹಮಯಿ ಕೃಷ್ಣ ನ್ಯೂಸ್ 18 ಕನ್ನಡದ ಜೊತೆ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಆಸ್ತಿಯನ್ನ ಬಾಮೈದನ ಹೆಸರಿಗೆ ಸುಳ್ಳು ದಾಖಲಾತಿ ಸೃಷ್ಟಿ ಮಾಡಿದ್ದಾರೆ ಅಂತ ಆರೋಪಿಸಿದ್ದಾರೆ.