Breaking News

ಇಬ್ಬರ ಮನೆಯಲ್ಲಿ ಪ್ರೀತಿಗೆ ವಿರೋಧ ನೇಣು ಬಿಗಿದುಕೊಂಡು ಆತ್ಮಹತ್ಯೆ

Spread the love

ಬಾಗಲಕೋಟೆ : ಮನೆಯಲ್ಲಿ ಇಬ್ಬರ ಪ್ರೀತಿಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮನನೊಂದು ಯುವಕ ಮತ್ತು ಯುವತಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಂದಗಾಂವ್ ಗ್ರಾಮದಲ್ಲಿ ನಡೆದಿದೆ.‌

ರಬಕವಿ – ಬನಹಟ್ಟಿ ತಾಲೂಕಿನ ನಂದಗಾಂವ ಗ್ರಾಮದ ಸಚಿನ್ ಭೀಮಪ್ಪ ದಳವಾಯಿ ( 22 ) ಹಾಗೂ ಪ್ರೀಯಾ ಮಲ್ಲಪ್ಪ ಮಡಿವಾಳ ( 19 ) ನಾಗರಪಂಚಮಿ ದಿನವೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಯುವಕ ಹಾಗೂ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಗ್ರಾಮದ ಕೆಲವರು ಬೈದು ಇಬ್ಬರಿಗೂ ಬುದ್ದಿ ಹೇಳಿದ್ದರು. ಆದರೆ ಶುಕ್ರವಾರ ಮರದ ಕೊಂಬೆಗೆ ಇಬ್ಬರೂ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ‌ಮಾಡಿಕೊಂಡಿದ್ದಾರೆ.‌

ಸ್ಥಳಕ್ಕೆ ಮಹಾಲಿಂಗಪೂರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ