Breaking News
Home / ಜಿಲ್ಲೆ / ವರ್ಷವಾದರೂ ದೊರಕದ ಪರಿಹಾರ: ಹೋರಾಟದ ಎಚ್ಚರಿಕೆ ನೀಡಿದ ಬೆಳಗಾವಿಯ ಪ್ರವಾಹ ಸಂತ್ರಸ್ತರು

ವರ್ಷವಾದರೂ ದೊರಕದ ಪರಿಹಾರ: ಹೋರಾಟದ ಎಚ್ಚರಿಕೆ ನೀಡಿದ ಬೆಳಗಾವಿಯ ಪ್ರವಾಹ ಸಂತ್ರಸ್ತರು

Spread the love

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಬಂದು ವರ್ಷ ಕಳೆದರೂ ಸರಕಾರದಿಂದ 9 ಸಾವಿರಕ್ಕೂ ಹೆಚ್ಚಿನ ಸಂತ್ರಸ್ತ ಕುಟುಂಬಗಳಿಗೆ ಇಲ್ಲಿಯವರೆಗೂ ಯಾವುದೇ ಪರಿಹಾರ ದೊರಕಿಲ್ಲ ಎಂದು ತಿಳಿದುಬಂದಿದೆ.

ಕಳೆದ ವರ್ಷ ಜುಲೈ ತಿಂಗಳಲ್ಲಿ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಪ್ರವಾಹ ಬಂದು ಅಪಾರ ಹಾನಿ ಸಂಭವಿಸಿತ್ತು. ಆ ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ತಾಂತ್ರಿಕ ಸಮಸ್ಯೆ ಕಾರಣ ನೀಡಿ ಪರಿಹಾರ ಮಂಜೂರು ಮಾಡಲು ಸಾಧ್ಯವಾಗಿಲ್ಲ ಎಂದು ಜಿಲ್ಲಾಡಳಿತದ ಅಧಿಕೃತ ಅಂಕಿ-ಅಂಶಗಳು ಹೇಳುತ್ತಿವೆ.

ಮನೆ ಕಳೆದುಕೊಂಡ ಸಂತ್ರಸ್ತರೆಲ್ಲರೂ ಬಿದ್ದ ಜಾಗದಲ್ಲೇ ಶೆಡ್‍ನಲ್ಲೋ ಅಥವಾ ಬಂಧುಗಳ ಮನೆಯಲ್ಲೋ ವಾಸ ಮಾಡುತ್ತಿದ್ದಾರೆ. ಸಂಪೂರ್ಣವಾಗಿ ಸೂರು ಕಳೆದುಕೊಂಡಿರುವವರಿಗೂ ನೆರವು ದೊರೆತಿಲ್ಲ. ಮತ್ತೊಂದು ಮುಂಗಾರು ಮಳೆ ಆರಂಭವಾಗಿರುವುದರಿಂದ ಅವರು ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ ಎಂದು .
ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿರುವ ರಾಮದುರ್ಗದ ಮಲಪ್ರಭಾ ನದಿ ಪ್ರವಾಹ ಸಂತ್ರಸ್ತರು, ಪರಿಹಾರ ನೀಡದಿದ್ದರೆ, ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ತಾಂತ್ರಿಕ ಸಮಸ್ಯೆಯಿಂದಾಗಿ ನೆರೆ ಸಂತ್ರಸ್ತರಿಗೆ ಪರಿಹಾರ ದೊರಕಿಲ್ಲ. ಅಧಿಕಾರಿಗಳು ಸದ್ಯದಲ್ಲಿಯೇ ವರದಿ ಸಲ್ಲಿಸಲಿದ್ದು, ಈ ಬಗ್ಗೆ ಸಿಎಂ ಜೊತೆ ಚರ್ಚಿಸಿ ಸಮಸ್ಯೆ ಪರಿಹರಿಸಲು ಯತ್ನಿಸುವೆ.

ಸಚಿವ ರಮೇಶ ಜಾರಕಿಹೊಳಿ


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ