ಬೆಂಗಳೂರು, ಆಗಸ್ಟ್ 10: ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಖಾತೆಗಳಿಗೆ ವರ್ಗಾವಣೆಯಾಗದೇ ಇರುವುದು, ಎರಡ್ಮೂರು ತಿಂಗಳುಗಳಿಂದ ಬಾಕಿ ಇರುವ ಬಗ್ಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿದೆ.
ಈ ಸಂದರ್ಭದಲ್ಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಹಣ ವರ್ಗಾವಣೆ ಯಾಕೆ ವಿಳಂಬವಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.ಗೃಹಲಕ್ಷ್ಮಿ ಯೋಜನೆಗೆ ಪ‌್ರತಿ ತಿಂಗಳಿಗೆ 2,400 ಕೋಟಿ ರೂ. ಖರ್ಚಾಗುತ್ತಿದೆ. ಮಂಡ್ಯದಲ್ಲಿ ಡಿಪಿಟಿಗೆ ಪುಷ್ ಮಾಡಿ ಮೂರು ದಿನಗಳಾದವು. ಇನ್ನೂ ನಾಲ್ಕೈದು ಜಿಲ್ಲೆಗಳಿಗೆ ಯೋಜನೆಯ ಹಣ ದೊರೆಯಬೇಕಿದೆ. ಬ್ಯಾಂಕ್ಗಳಿಗೆ ಹಣ ಕಳುಹಿಸಿರುತ್ತೇವೆ. ಸ್ಥಳೀಯ ಮಟ್ಟವಾಗಿ ಯಜಮಾನಿಯರ ಖಾತೆಗೆ ವರ್ಗಾವಣೆಯಾಗಬೇಕು. ದೊಡ್ಡ ಮೊತ್ತದ ಹಣ ಆಗಿರುವ ಕಾರಣ ವಿಳಂಬ ಆಗುತ್ತಿರುತ್ತದೆ ಎಂದರು.