Breaking News

ಕರ್ನಾಟಕದಲ್ಲಿ ‘ಭೂ ಕುಸಿತ ತಡೆ’ಗೆ ಶೀಘ್ರವೇ ‘ಹೊಸ ನೀತಿ’ ಜಾರಿ

Spread the love

ಬೆಂಗಳೂರು: ಕೇರಳದ ವಯನಾಡಿನಲ್ಲಿ ಉಂಟಾದಂತ ಭೂ ಕುಸಿತದ ನಂತ್ರ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಕರ್ನಾಟಕದಲ್ಲಿ ಭೂ ಕುರಿತ ತಡೆಗೆ ಶೀಘ್ರವೇ ಹೊಸ ನೀತಿ ಜಾರಿಗೆ ತರಲು ನಿರ್ಧರಿಸಿದೆ.

ಈ ಕುರಿತಂತೆ ಮಾಹಿತಿ ನೀಡಿರುವಂತ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, ಘಟ್ಟ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಭೂ ಕುಸಿತದ ಪರಿಣಾಮಗಳನ್ನು ತಗ್ಗಿಸುವ ಸಂಬಂಧ ಅಭಿವೃದ್ಧಿ ಕೇಂದ್ರಿತ ಚಟುವಟಿಕೆ ನಿಯಂತ್ರಿಸುವ ನೀತಿಯೊಂದನ್ನು ರೂಪಿಸಲಾಗುತ್ತಿದೆ, ಗುಡ್ಡಗಳನ್ನು ಕಡಿದು ನಿರ್ಮಾಣ ಚಟುವಟಿಕೆ ಕೈಗೊಳ್ಳುವುದು ಸೇರಿ ಹಲವು ಅವೈಜ್ಞಾನಿಕ ಅಭಿವೃದ್ಧಿಗೆ ನಿರ್ಬಂಧಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

Good News: ಕರ್ನಾಟಕದಲ್ಲಿ 'ಭೂ ಕುಸಿತ ತಡೆ'ಗೆ ಶೀಘ್ರವೇ 'ಹೊಸ ನೀತಿ' ಜಾರಿ

ಗುಡ್ಡಗಳನ್ನು 90 ಡಿಗ್ರಿಯಲ್ಲಿ ಲಂಬವಾಗಿ ಕತ್ತರಿಸುವುದನ್ನು ತಡೆಯುವುದು, ಗುಡ್ಡದಿಂದ ನೀರು ಸರಾಗವಾಗಿ ಹರಿದುಹೋಗುವಂತೆ ವ್ಯವಸ್ಥೆ ಮಾಡುವುದು ಸೇರಿ ನಿರ್ಮಾಣ ಪರವಾನಗಿಯಲ್ಲಿ ಷರತ್ತು ವಿಧಿಸುವುದು, ಅನಧಿಕೃತ ನಿರ್ಮಾಣ ಚಟುವಟಿಕೆಗಳನ್ನು ನಿರ್ಬಂಧಿಸುವುದು ಒಳಗೊಂಡಂತೆ ಹಲವು ಉಪಕ್ರಮಗಳು ನೀತಿಯಲ್ಲಿ ಇರಲಿವೆ ಎಂದು ಅವರು ಹೇಳಿದ್ದಾರೆ.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ