Breaking News

ದಾಂಪತ್ಯ ಜೀವನಕ್ಕೆ ಕಾಲಿಟ್ಟ ತರುಣ್​ ಸುಧೀರ್​- ಸೋನಲ್

Spread the love

ಬೆಂಗಳೂರು: ಡೈರೆಕ್ಟರ್​​ ತರುಣ್‌ ಕಿಶೋರ್‌ ಸುಧೀರ್‌ ಹಾಗೂ ಕನ್ನಡದ ನಟಿ ಸೋನಲ್‌ ಮಂಥೆರೊ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ತರುಣ್‌ ಕಿಶೋರ್‌ ಸುಧೀರ್‌ , ಸೋನಲ್‌ ಮಂಥೆರೊ ಜೋಡಿ ಗುರು ಹಿರಿಯರು, ಸ್ನೇಹಿತರು, ಹಾಗೂ ಬಂಧು ಮಿತ್ರರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ.

ಈ ಮದುವೆಯ ಫೋಟೋ ಹಾಗೂ ವಿಡಿಯೋಗಳು ವೈರಲ್​​ ಆಗಿವೆ. ಈ ಜೋಡಿಯ ಹೊಸ ಜೀವನಕ್ಕೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ.

ಆಗಸ್ಟ್-11 ರಂದು ಬೆಳಗ್ಗೆ 10:50 ರಿಂದ 11:35 ಸಮಯದ ತುಲಾ ಲಗ್ನದಲ್ಲಿ ಮಾಂಗಲ್ಯ ಧಾರಣೆ ನೆರವೇರಿದೆ. ಹಿಂದೂ ಸಂಪ್ರದಾಯದಂತೆ ನಡೆಯಲಿರೋ ಈ ಮದುವೆಗೆ ಗಣ್ಯಾತಿ ಗಣ್ಯರು ಹಾಗೂ ಸಿನಿಮಾ ಗಣ್ಯರು ಆಗಮಿಸಿದ್ದರು.

ಮದುವೆಯೂ ಮೈಸೂರು ರಸ್ತೆಯ ಪೂರ್ಣಿಮಾ ಪ್ಯಾಲೆಸ್​ನಲ್ಲಿ ನಡೆಯುತ್ತಿದೆ. ತರುಣ್‌ ಸುಧೀರ್‌ ಅವರ ಮನೆಯಲ್ಲಿ ಸಂಭ್ರಮ ಮನೆಮಾಡಿದೆ. ನಟ ಶರಣ್​ ದಂಪತಿ, ನಟಿ ಶೃತಿ ಕುಟುಂಬಸ್ಥರು, ನೆನಪಿರಲಿ ಪ್ರೇಮ್ ದಂಪತಿ ಸೇರಿದಂತೆ ಇನ್ನೂ ಹಲವಾರು ಸ್ಟಾರ್​ ನಟ ನಟಿಯರು ಬಂದಿದ್ದಾರೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ತರುಣ್​ ಸುಧೀರ್​- ಸೋನಲ್


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ