Breaking News

ಮದ್ವೆ ಬಳಿಕ ಮೊದಲ ಬಾರಿ ಮನೆಗೆ ಬಂದ ಅಳಿಯನಿಗೆ 100 ಬಗೆಯ ಖಾದ್ಯ ತಯಾರಿಸಿ, ಉಣಬಡಿಸಿದ ಅತ್ತೆ!

Spread the love

ವಿಜಯವಾಡ: ಮನೆಗೆ ಬಂದ ಅಳಿಯನಿಗೆ ಅತ್ತೆ-ಮಾವಂದಿರು ವಿಶೇಷ ಮನ್ನಣೆ ನೀಡುವುದು ಸಾಮಾನ್ಯ ಸಂಗತಿ. ಆದರೆ, ಆಂಧ್ರಪ್ರದೇಶದಲ್ಲಿ ಬಹಳ ಹಿಂದಿನಿಂದ ಒಂದು ವಿಶೇಷ ಸಂಪ್ರದಾಯ ನಡೆದುಕೊಂಡು ಬರುತ್ತಿದೆ. ಅದೇನೆಂದರೆ, ಮದುವೆಯಾಗಿ ಮೊದಲ ಬಾರಿಗೆ ಮನೆಗೆ ಬಂದ ಅಳಿಯನಿಗೆ ವಿವಿಧ ಬಗೆಯ ಭಕ್ಷ್ಯಗಳನ್ನು ತಯಾರಿಸಿ ಉಣಬಡಿಸುವುದು.

ಮದ್ವೆ ಬಳಿಕ ಮೊದಲ ಬಾರಿ ಮನೆಗೆ ಬಂದ ಅಳಿಯನಿಗೆ 100 ಬಗೆಯ ಖಾದ್ಯ ತಯಾರಿಸಿ, ಉಣಬಡಿಸಿದ ಅತ್ತೆ!

ಆಂಧ್ರದ ಗೋದಾವರಿ ಜಿಲ್ಲೆಯಲ್ಲಿ ಇಂತಹ ಆಚರಣೆಗಳು ಹೆಚ್ಚಾಗಿ ಕಂಡುಬರುತ್ತವೆ. ಇದೀಗ ಕಾಕಿನಾಡದಲ್ಲಿ ಮನೆಗೆ ಬಂದ ಹೊಸ ಅಳಿಯನಿಗೆ ಅತ್ತೆ 100 ಬಗೆಯ ಖಾದ್ಯಗಳನ್ನು ತಯಾರಿಸಿ ಬಡಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

 


Spread the love

About Laxminews 24x7

Check Also

ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ

Spread the love ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ಉದ್ಘಾಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ