ಬೆಳಗಾವಿ: ದೆಹಲಿಯಲ್ಲಿ ಆ.15ರಂದು ನಡೆಯಲಿರುವ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅತಿಥಿಯಾಗಿ ಭಾಗವಹಿಸಲು ಇಲ್ಲಿನ ಸರ್ಕಾರಿ ಸರಸ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಕೀರ್ತಿ ಜಟಗಣ್ಣವರ, ಸಂಜನಾ ಮುದಿಗೌಡರ ಹಾಗೂ ಉಪನ್ಯಾಸಕಿ ಅನುಸೂಯಾ ಹಿರೇಮಠ ಆಯ್ಕೆಯಾಗಿದ್ದಾರೆ.
‘ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನನ್ನ ಮತಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಮತ್ತು ಉಪನ್ಯಾಸಕಿ ಅತಿಥಿಯಾಗಿ ಪಾಲ್ಗೊಳ್ಳುತ್ತಿರುವುದು ಅಭಿಮಾನದ ಸಂಗತಿ’ ಎಂದು ಶಾಸಕ ಅಭಯ ಪಾಟೀಲ ಸಂತಸ ಹಂಚಿಕೊಂಡಿದ್ದಾರೆ.
Laxmi News 24×7