Breaking News

ರೈತರಿಗಾಗಿ ಹೋರಾಟಕ್ಕೆ ಸಿದ್ದ: ಶಾಸಕ ರಾಜು ಕಾಗೆ

Spread the love

ಕಾಗವಾಡ: ಸರ್ಕಾರ ಈ ಭಾಗ ಬಹು ನಿರೀಕ್ಷಿತ ಖಿಳೇಗಾಂವ ಬಸವೇಶ್ವರ ಏತ ನೀರಾವರಿ ಯೋಜನೆ ವಿಳಂಬ ಮಾಡಿದಲ್ಲಿ ನಾನು ಸಹ ಸ್ಥಳೀಯ ರೈತರ ಜೊತೆ ಹೋರಾಟಕ್ಕೆ ಸಿದ್ದ ಇದ್ದೆನೆ ಎಂದು ಕಾಗವಾಡ ಕಾಂಗ್ರೆಸ್ ಶಾಸಕ ಹಾಗೂ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ರಾಜು ಕಾಗೆ ಹೇಳಿದರು.

 

ಉಗಾರದಲ್ಲಿ ಸುದ್ದಿಗಾರರೊಂದಿಗೆಮಾತನಾಡಿದ ಅವರು, ‘ಬಸವೇಶ್ವರ ಏತ ನೀರಾವರಿ ಕುರಿತು ಸಿಎಂ ಜೊತೆ ಸಮಗ್ರ ಚರ್ಚೆ ಮಾಡಿದ್ದು, ಪೂರ್ಣಪ್ರಮಾಣದ ಕಾಮಗಾರಿಯಲ್ಲಿ ಸರ್ಕಾರದ ಲೋಪದೋಷಗಳಿಲ್ಲ. ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಕಾಮಗಾರಿ ವಿಳಂಬವಾಗಿದ್ದು, ರೈತರ ಒಳಿತಿಗಾಗಿ ರೈತರ ಜೊತೆಗೆ ಸರ್ಕಾರದ ವಿರುದ್ಧವೂ ಹೋರಾಟ ಮಾಡಲು ಸಿದ್ಧನಾಗಿದ್ದೇನೆ’ ಎಂದರು.

‘ಈಗಾಗಲೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದು, ಒಂದೆಡೆ ಪ್ರವಾಹ ಮತ್ತೊಂದೆಡೆ ಬರ ಪರಿಸ್ಥಿತಿ ಇದೆ ಈ ಕುರಿತು ಸರ್ಕಾರಕ್ಕೆ ಸೂಕ್ತ ಪರಿಹಾರ ಹಾಗೂ ಬಸವೇಶ್ವರ ಎತ ನೀರಾವರಿ ವಿಳಂಬವಾಗದಂತೆ ಮನವರಿಕೆ ಮಾಡಿದ್ದೇನೆ. ಒಂದು ವೇಳೆ ಆಗಸ್ಟ್ 30ರ ಒಳಗಾಗಿ ನೀರು ಬಿಡದಿದ್ದರೆ ರೈತರು ಹೋರಾಟಕ್ಕೆ ನಿಂತರೆ ನಾನು ರೈತರ ಜೊತೆಗೂಡಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಿದ್ದನಾಗಿದ್ದೇನೆ’ ಎಂದು ಶಾಸಕ ಹಾಗೂ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ರಾಜು ಕಾಗೆ ಹೇಳಿದರು.


Spread the love

About Laxminews 24x7

Check Also

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ