Breaking News

ತುಂಗಭದ್ರಾ ಜಲಾಶಯ ಅವಘಡ | ಹೆಕ್ಟರ್‌ಗೆ ₹ 50 ಸಾವಿರ ಪರಿಹಾರ ನೀಡಿ: ವಿಜಯೇಂದ್ರ

Spread the love

(ಕೊಪ್ಪಳ ಜಿಲ್ಲೆ): ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್ ಮುರಿದು ಅಪಾರ ಪ್ರಮಾಣದ ನೀರು ಪೋಲಾಗಿದ್ದು, ಇದರಿಂದ ರೈತರಿಗೆ ಸಾಕಷ್ಟು ತೊಂದರೆಯಾಗಿದೆ. ಇದಕ್ಕೆ ಪರಿಹಾರವಾಗಿ ರಾಜ್ಯ ಸರ್ಕಾರ ಪ್ರತಿ ಹೆಕ್ಟೇರ್ ಪ್ರದೇಶಕ್ಕೆ ₹50 ಸಾವಿರ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.

ವಿಜಯೇಂದ್ರ ಆಗ್ರಹಿಸಿದರು.

ಸೋಮವಾರ ಕೊಚ್ಚಿ‌ ಹೋದ ಗೇಟ್ ಸ್ಥಳ ಪರಿಶೀಲಿಸಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಜಲಾಶಯದಲ್ಲಿ ಆದ ಲೋಪದ ಸಂಪೂರ್ಣ ಜವಾಬ್ದಾರಿ ರಾಜ್ಯ ಸರ್ಕಾರವೇ ಹೊತ್ತುಕೊಳ್ಳಬೇಕು. ರೈತರಿಗೆ ಆದ ಅನ್ಯಾಯ ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ಮಳೆ ಕೊರತೆಯಿಂದ ಕಳೆದ ವರ್ಷ ಬರಗಾಲ ಕಾಡಿತ್ತು. ಈ ವರ್ಷ ಉತ್ತಮ ಮಳೆಯಾಗಿ ಜಲಾಶಯ ತುಂಬಿದ್ದರೂ ಆ ನೀರು ಉಳಿಸಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗಲಿಲ್ಲ. ಈಗ ತನ್ನ ಹೊಣೆಗಾರಿಕೆ ತಪ್ಪಿಸಿಕೊಳ್ಳಲು ಯಾವ ಅಧಿಕಾರಿಗಳನ್ನು ಟೀಕಿಸುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ‌ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಯಾರನ್ನೂ ಟೀಕಿಸದೇ ಹೊಣೆಗಾರಿಕೆಯನ್ನು ಇಲಾಖೆಯ ಸಚಿವರೇ ಹೊತ್ತುಕೊಳ್ಳಬೇಕು ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ