Breaking News

ಬೆಳಗಾವಿಯಲ್ಲಿ ನಡೆದಿದ್ದು ಬಿಜೆಪಿಯ ಗೌಪ್ಯ ಸಭೆಯಲ್ಲ: ಅರವಿಂದ್ ಬೆಲ್ಲದ್

Spread the love

ಧಾರವಾಡ: ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ರಮೇಶ ಜಾರಕಿಹೊಳಿ ಹಾಗೂ ಸಿದ್ದೇಶ್ವರ ಅವರು ಗೌಪ್ಯವಾಗಿ ಸಭೆ ಮಾಡಿಲ್ಲ. ಬದಲಾಗಿ ಬಹಿರಂಗವಾಗಿಯೇ ಮಾಡಿದ್ದಾರೆ. ಅದೇನು ಗೌಪ್ಯ ಸಭೆಯಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರ ವಿಚಾರದಲ್ಲಿ ಕೆಲವೊಂದಿಷ್ಟು ವಿಚಾರಗಳನ್ನು ಪಕ್ಷದೊಳಗೆ ಚರ್ಚೆ ಮಾಡಬೇಕಿದೆ.

ಪಕ್ಷದೊಳಗೆ ಕುಳಿತು ಎಲ್ಲರೂ ಮಾತನಾಡುವ ಅವಶ್ಯಕತೆಯಿದೆ. ಅದನ್ನು ಮಾಧ್ಯಮಗಳ ಮುಂದೆ ಮಾತನಾಡುವುದು ಸರಿಯಲ್ಲ ಎಂದರು‌.

BJP; ಬೆಳಗಾವಿಯಲ್ಲಿ ನಡೆದಿದ್ದು ಬಿಜೆಪಿಯ ಗೌಪ್ಯ ಸಭೆಯಲ್ಲ: ಅರವಿಂದ್ ಬೆಲ್ಲದ್

ಒಂದು ಪಕ್ಷ ಎಂದಾಗ ಬೇರೆ ಬೇರೆ ವಿಚಾರಗಳು ಇದ್ದೇ ಇರುತ್ತವೆ. ಅವರು ಹೇಳುವ ಕೆಲ ವಿಚಾರಗಳು ಸರಿ ಇವೆ. ಅವುಗಳ ಬಗ್ಗೆ ಪಕ್ಷದೊಳಗೆ ಚರ್ಚೆ ಆಗಬೇಕಿದೆ. ಈ ವಿಚಾರಗಳ ಬಗ್ಗೆ ಪಕ್ಷದ ಚೌಕಟ್ಟಿನಲ್ಲಿ ಮಾತನಾಡುತ್ತೇವೆ. ಎಲ್ಲವನ್ನೂ ಬಗೆಹರಿಸುವ ಪ್ರಯತ್ನ ಆಗುತ್ತದೆ ಎಂದರು.

ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ. ಕಾಂಗ್ರೆಸ್‌ ನಲ್ಲೂ ಒಂದು ರೀತಿಯ ಅಸಮಾಧಾನ ಇದ್ದೇ ಇದೆ. ಒಂದೊಂದು ದಿನ ಒಬ್ಬೊಬ್ಬರು ಸಿಎಂ ಆಗಬೇಕು ಎನ್ನುತ್ತಿದ್ದಾರೆ. ಇದು ಎಲ್ಲ ಪಕ್ಷಗಳಲ್ಲಿ ಇದ್ದದ್ದೆ ಎಂದರು.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ