Breaking News

ಫೇಸ್‌ ಬುಕ್‌ ಗೆಳತಿಯನ್ನು ನಂಬಿ 11 ಲಕ್ಷ ಕಳೆದುಕೊಂಡ ಕಾರ್ಕಳದ ಮಹಿಳೆ

Spread the love

ಡುಪಿ: ಸಾಮಾಜಿಕ ಜಾಲತಾಣ ಫೇಸ್‌ ಬುಕ್‌ ಮೂಲಕ ಪರಿಚಯವಾದ ಮಹಿಳೆಯನ್ನು ನಂಬಿದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಹಿಳೆಯೊಬ್ಬರು 11 ಲಕ್ಷಕ್ಕೂ ಹೆಚ್ಚು ಮೊತ್ತ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ.

ಕಾರ್ಕಳ ತಾಲೂಕಿನ ಮಿಯಾರಿನ ಕುಂಟಿಬೈಲಿನ 38 ವರ್ಷದ ನಿವಾಸಿಯೊಬ್ಬರಿಗೆ ಫೇಸ್‌ ಬುಕ್‌ ಮೂಲಕ ಮಾರ್ಕ್‌ ಸೀಮಾ ಎಂಬವರು ಪರಿಚಯವಾಗಿದ್ದರು.

ಗೆಳೆತನದಲ್ಲಿ ಅವರು ತಮ್ಮ ವಿಳಾಸವನ್ನು ನೀಡಿದ್ದರು. ಅವರ ನಂಬರಿನಿಂದ ಸುನಿತಾ ಕುಮಾರಿ ಎಂಬವರು ಮಹಿಳೆಗೆ ಲಂಡನ್ ನಿಂದ ಚಿನ್ನದ ವಸ್ತು ಮತ್ತು ಪೌಂಡು ಹಣ ಪಾರ್ಸೆಲ್ ಬಂದಿದೆ ಎಂದು ಹೇಳಿ ಅದರ ಕಸ್ಟಮ್ ಚಾರ್ಜ್ ಹಾಗೂ ಐ.ಟಿ ರೈಡ್ ಮಾಡುವುದಾಗಿ ಬೆದರಿಸಿ ಹಣ ವಸೂಲಿ ಮಾಡಿದ್ದಾರೆ.

ಕಾರ್ಕಳದ ಮಹಿಳೆಯು ಹಂತ ಹಂತವಾಗಿ ಗೂಗಲ್‌ಪೇ ಮೂಲಕ ಒಟ್ಟು 11,94,490 ರೂ ಹಣವನ್ನು ವರ್ಗಾವಣೆ ಮಾಡಿದ್ದಾರೆ.

ಈ ಬಗ್ಗೆ ಉಡುಪಿ ಸೆನ್‌ ಅಪರಾಧ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 60/2024ಕಲಂ: 66 (ಸಿ) (ಡಿ) ಐ.ಟಿ. ಆಕ್ಟ್ ರಂತೆ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ದುಡಿಯುವ ಕಾರ್ಯಕರ್ತರ ಪಡೆ ರಚಿಸುವುದೇ ಕಾಂಗ್ರೆಸ್ ಪ್ರಚಾರ ಸಮಿತಿಯ ಉದ್ದೇಶ:ವಿನಯಕುಮಾರ ಸೊರಕೆ

Spread the love ಚಿಕ್ಕೋಡಿ-“ಸೇನಾಧಿಪತಿಗಳನ್ನು ಹುಟ್ಟುಹಾಕುದಷ್ಟೇ ಅಲ್ಲ, ಸೈನಿಕರ ಅವಶ್ಯಕತೆಯೂ ಕಾಂಗ್ರೆಸ್ ಪಕ್ಷಕ್ಕಿದೆ. ಹೀಗಾಗಿ ಪದಾಧಿಕಾರಿಗಳ ನೇಮಕದೊಂದಿಗೆ ಪಕ್ಷಕ್ಕೆ ದುಡಿಯುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ