Breaking News

ರಾಜ್ಯ ಸರ್ಕಾರದಿಂದ 6 ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

Spread the love

ಬೆಂಗಳೂರು: ರಾಜ್ಯ ಸರ್ಕಾರದಿಂದ 6 ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಈ ಕುರಿತಂತೆ ಅಧಿಸೂಚನೆಯನ್ನು ಹೊರಡಿಸಿರುವಂತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಗೀತಾಬಾಯಿ ಅವರು, ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಕೆಳಕಂಡ ವಿವಿಧ ಅಕಾಡೆಮಿ, ಪ್ರಾಧಿಕಾರಗಳಿಗೆ ಹಾಗೂ ವಿವಿಧ ರಂಗಾಯಣಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ನೇಮಕ ಮಾಡಿ ಆದೇಶಿಸಿದ್ದಾರೆ.

BREAKING: ರಾಜ್ಯ ಸರ್ಕಾರದಿಂದ 6 ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಿಸಿ ಆದೇಶ

ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಘೋಷಣೆ ಮಾಡಿದ ಸಚಿವ ಶಿವರಾಜ ತಂಗಡಗಿ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಇಂದು ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಘೋಷಣೆ ಮಾಡುವ ಮೂಲಕ ರಾಜ್ಯದ ರಂಗಭೂಮಿ ಚಟುವಟಿಕೆಗಳಿಗೆ ದೊಡ್ಡ ಮಟ್ಟದಲ್ಲಿ ಚಾಲನೆ ನೀಡಿದ್ದಾರೆ.

  1. ಮೈಸೂರು ರಂಗಾಯಣದ ನಿರ್ದೇಶಕರಾಗಿ ಸತೀಶ್ ತಿಪಟೂರು
  2. ಧಾರವಾಡ ರಂಗಾಯಣದ ನಿರ್ದೇಶಕರಾಗಿ ರಾಜು ತಾಳಿಕೋಟೆ
  3. ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಪ್ರಸನ್ನ ಡಿ ಸಾಗರ
  4. ಕಲಬುರ್ಗಿ ರಂಗಾಯಣದ ನಿರ್ದೇಶಕರಾಗಿ ಡಾ. ಸುಜಾತ ಜಂಗಮ ಶೆಟ್ಟಿ
  5. ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆಗೆ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಡಕೋಳ.

ಯಕ್ಷರಂಗಾಯಣ, ಕಾರ್ಕಳದ ನಿರ್ದೇಶಕರಾಗಿ ವೆಂಕಟರಮಣ ಐತಾಳ ಇವರನ್ನು ನೇಮಕ ಮಾಡಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಕೇರಳ ಸಿಎಂ ಪುತ್ರಿಯ ಕಂಪನಿ ವಿರುದ್ಧ ತನಿಖೆಗೆ ಆದೇಶ ಪ್ರಶ್ನಿಸಿ ಮೇಲ್ಮನವಿ: ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್‌

Spread the love ಬೆಂಗಳೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಪುತ್ರಿ ಟಿ.ವೀಣಾ ಅವರು ನಿರ್ದೇಶಕಿಯಾಗಿರುವ ಎಕ್ಸಲಾಜಿಕ್‌ ಸಲ್ಯೂಷನ್‌ ಪ್ರೈವೇಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ