Breaking News

ಮನೆ ಹಾನಿಗೆ ತಕ್ಷಣ ಪರಿಹಾರ ಒದಗಿಸಿ’

Spread the love

ಬೆಳಗಾವಿ: ‘ಜಿಲ್ಲೆಯಲ್ಲಿ ಇತ್ತೀಚೆಗೆ ಅತಿವೃಷ್ಟಿ ಮತ್ತು ಪ್ರವಾಹದಿಂದ ಹಾನಿಗೆ ಒಳಗಾದ ಮನೆಗಳ ಸ್ಥಳಗಳನ್ನು ಮಹಜರು ಮಾಡಬೇಕು. ವಸತಿ ನಿಗಮದ ಪೋರ್ಟಲ್‌ನಲ್ಲಿ ಮಾಹಿತಿ ದಾಖಲಿಸಿ ಪರಿಹಾರ ಒದಗಿಸಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

'ಮನೆ ಹಾನಿಗೆ ತಕ್ಷಣ ಪರಿಹಾರ ಒದಗಿಸಿ'

‘ಜಿಲ್ಲೆಯಲ್ಲಿ ಸಂಪೂರ್ಣ ಹಾನಿಗೀಡಾದ ಮನೆಗಳ ಮಾಹಿತಿ ಲಭ್ಯವಿದೆ. ಅಂಥ ಮನೆಗಳಿಗೆ ತ್ವರಿತವಾಗಿ ಪರಿಹಾರ ವಿತರಿಸಬೇಕು. ಈ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ವಿಳಂಬ ತೋರಬಾರದು. ಒಂದುವೇಳೆ, ರಾಜೀವ್‌ ಗಾಂಧಿ ವಸತಿ ನಿಗಮದ ಪೋರ್ಟಲ್‌ನಲ್ಲಿ ಮಾಹಿತಿ ದಾಖಲಿಸಲು ತಾಂತ್ರಿಕ ತೊಂದರೆ ಎದುರಾದರೆ, ಅಂತಹ ಮನೆಗಳ ಕುರಿತ ವರದಿ ಸಲ್ಲಿಸಬೇಕು’ ಎಂದು ತಿಳಿಸಿದರು.

‘ಸಮೀಕ್ಷಾ ವರದಿ ಪ್ರಕಾರ, ಯಾವ ವರ್ಗದಡಿ ಮನೆ ಹಾನಿಯಾಗಿದೆ ಎಂದು ನಮೂದಿಸಬೇಕು. ಬೆಳಗಾವಿ ತಾಲ್ಲೂಕಿನಲ್ಲಿ ಹಾನಿಗೀಡಾದ ನಾಲ್ಕು ಮನೆಗಳಿಗೆ ಈಗಾಗಲೇ ಪರಿಹಾರ ಕೊಟ್ಟಿದ್ದೇವೆ. ಉಳಿದ ಸಂತ್ರಸ್ತರಿಗೆ ಸರ್ಕಾರದ ಹೊಸ ಮಾರ್ಗಸೂಚಿ ಅನ್ವಯ ಪರಿಹಾರ ವಿತರಿಸಲು ಕ್ರಮ ವಹಿಸಬೇಕು’ ಎಂದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ