Breaking News

ಕುರಿ ಸಾಕಾಣಿಕೆ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್. 78 ಕುರಿಗಳು ಸಜೀವ ದಹನ

Spread the love

ಮುಂಡಗೋಡ: ಪಟ್ಟಣದ ಹೊರವಲಯದ ತೋಟವೊಂದರಲ್ಲಿ ಕುರಿ ಸಾಕಾಣಿಕೆ ಘಟಕಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ 78 ಕುರಿಗಳು ಸಜೀವ ದಹನಗೊಂಡ ಘಟನೆ ಬುಧವಾರ(ಆಗಸ್ಟ್ 14) ನಡೆದಿದೆ.

ಕಲಘಟಗಿ ರಸ್ತೆಯಲ್ಲಿರುವ ನಜೀರ ಅಹ್ಮದ ದರ್ಗಾವಾಲೆ ಎಂಬುವವರಿಗೆ ಸೇರಿದ ತೋಟ ಇದಾಗಿದ್ದು.Mundagod: ಕುರಿ ಸಾಕಾಣಿಕೆ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್. 78 ಕುರಿಗಳು ಸಜೀವ ದಹನ

ಇವರು ತಮ್ಮ ತೋಟದಲ್ಲಿ ಕುರಿ ಸಾಕಾಣಿಕೆ ಮಾಡಿದ್ದರು. ಬೆಳಿಗ್ಗೆಯಿಂದ ತೋಟದಲ್ಲಿ ಇದ್ದು ಮಧ್ಯಾಹ್ನದ ವೇಳೆ ಊಟಕ್ಕೆಂದು ಮನೆಯ ಕಡೆ ಹೋಗಿದ್ದಾರೆ. ಈ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಆವರಿಸಿ 78 ಕುರಿಗಳು ಸುಟ್ಟು ಕಟಕಲಾಗಿದೆ.

ಕೇವಲ ಒಂದು ಕುರಿ ಮಾತ್ರ ಅವಘಡದಿಂದ ಬದುಕುಳಿದಿದೆ. ವಿಷಯ ತಿಳಿದ ಅಗ್ನಿಶಾಮಕದಳವರು ಬೆಂಕಿ ನಿಯಂತ್ರಿಸಿದರಾದರೂ ಅಷ್ಟರೊಳಗೆ ಕುರಿಗಳು ಮೃತಪಟ್ಟಿವೆ. ಈ ಅವಘಡದಿಂದ ಲಕ್ಷಾಂತರ ರೂ ನಷ್ಟಯಾಗಿದೆ. ಘಟನಾ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪಶುವೈದ್ಯರು ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿದರು.


Spread the love

About Laxminews 24x7

Check Also

ಬೈಕ್​ ಡಿಕ್ಕಿ ಹೊಡೆದ ಪರಿಣಾಮ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಗಾಯಗೊಂಡಿದ್ದಾರೆ.

Spread the loveಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ವಿಧಾನಸಭೆ ಉಪ ಸಭಾಧ್ಯಕ್ಷರೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ