Breaking News

ಪೊಲೀಸರ ಮೇಲಿನ ಸಿಟ್ಟಿಗೆ ವಿಧಾನಸೌಧದ ಮುಂದೆಯೇ ಬೈಕ್ ಗೆ ಬೆಂಕಿ ಹಚ್ಚಿದ ಯುವಕ..!

Spread the love

ಬೆಂಗಳೂರು : ವಿಧಾನಸೌಧದ ಮುಂದೆ ಯುವಕನೋರ್ವ ತನ್ನ ಬೈಕ್ ಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮೂಲದ ಪ್ರಥ್ವಿರಾಜ್ ಎಂಬಾತ ವಿಧಾನಸೌಧದ ಮುಂದೆ ತನ್ನ ಎಲೆಕ್ಟ್ರಿಕ್ ಗೆ ಬೈಕ್ ಗೆ ಬೆಂಕಿ ಹಚ್ಚಿದ್ದಾನೆ ಎಂದು ತಿಳಿದು ಬಂದಿದೆ.

ಪೊಲೀಸರ ಮೇಲಿನ ಸಿಟ್ಟಿಗೆ ಈತ ಈ ಕೃತ್ಯ ಎಸಗಿದ್ದು, ತನ್ನ ತಾಯಿಗೆ ಪೊಲೀಸರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾನೆ.

BREAKING : ಪೊಲೀಸರ ಮೇಲಿನ ಸಿಟ್ಟಿಗೆ ವಿಧಾನಸೌಧದ ಮುಂದೆಯೇ ಬೈಕ್ ಗೆ ಬೆಂಕಿ ಹಚ್ಚಿದ ಯುವಕ..!

ಟ್ರಕ್ಕಿಂಗ್ ನಲ್ಲಿ ಯುವಕ ಪ್ರಥ್ವಿರಾಜ್ ಮಿಸ್ ಆಗಿದ್ದರು. ನಂತರ ಯುವಕನ ತಾಯಿ ದೂರು ನೀಡಲು ಚಳ್ಳಕೆರೆ ಠಾಣೆಗೆ ಹೋದಾಗ ಪೊಲೀಸರು ತನ್ನ ತಾಯಿಗೆ ಬೈಯ್ದಿದ್ದರು ಎಂದು ಯುವಕ ಆರೋಪಿಸಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮದ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಸದ್ಯ, ಪ್ರಥ್ವಿರಾಜ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಸಾಗರ | ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಪ್ರವಾಸಿ ಬಸ್ – 8 ಮಹಿಳೆಯರಿಗೆ ಗಾಯ

Spread the loveಶಿವಮೊಗ್ಗ: ಪ್ರವಾಸಕ್ಕೆ ಬಂದಿದ್ದ ಬಸ್ ಬ್ರೇಕ್‌ ಫೇಲ್‌ ಆಗಿ ಮನೆಯೊಂದರ ಮೇಲೆ ಬಿದ್ದ ಘಟನೆ ಸಾಗರ  ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ