Breaking News

ವಿತ್ರಾಗೌಡ ಚಪ್ಪಲಿ ಮೇಲೂ ರಕ್ತದ ಕಲೆ; ದರ್ಶನ್‌ & ಗ್ಯಾಂಗ್‌ಗೆ ಮತ್ತಷ್ಟು ಸಂಕಷ್ಟ

Spread the love

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪವಿತ್ರಾಗೌಡ, ದರ್ಶನ್‌ ತೂಗುದೀಪ ಮತ್ತು ಗ್ಯಾಂಗ್ ಜೈಲಿನಲ್ಲೇ ಸ್ವಾತಂತ್ರ್ಯ ದಿನಾಚರಣೆ ಮಾಡಿದೆ!, ಪೊಲೀಸರು ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ ಬಳಿಕ ಜಾಮೀನು ಪಡೆಯಬಹುದು ಎಂದು ಕನಸು ಕಾಣುತ್ತಿದ್ದ ದರ್ಶನ್ ಮತ್ತು ಗ್ಯಾಂಗ್‌ಗೆ ಪೊಲೀಸರು ಒಂದರ ಹಿಂದೊಂದು ಶಾಕ್ ಕೊಡುತ್ತಲೇ ಇದ್ದಾರೆ.

ರೇಣುಕಾಸ್ವಾಮಿ ಹತ್ಯೆ ನಡೆದ ದಿನ ದರ್ಶನ್‌ ಧರಿಸಿದ್ದ ಪ್ಯಾಂಟ್ ಮತ್ತು ಟೀ ಶರ್ಟ್ ಮೇಲೆ ರಕ್ತದ ಕಲೆ ಪತ್ತೆಯಾಗಿದ್ದು ಪೊಲೀಸರ ತನಿಖೆಗೆ ಹೆಚ್ಚಿನ ಬಲ ತಂದಿದೆ.

ಇದೀಗ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಧರಿಸಿದ್ದ ಚಪ್ಪಲಿ ಮೇಲೆ ಕೂಡ ರಕ್ತದ ಕಲೆ ಪತ್ತೆಯಾಗಿದ್ದು ಅದು ರೇಣುಕಾಸ್ವಾಮಿಯ ರಕ್ತದ ಮಾದರಿ ಜೊತೆ ತಾಳೆಯಾಗಿದೆ ಎಂದು ವರದಿಯಾಗಿದೆ. ಪೊಲೀಸರು ಎಫ್‌ಎಸ್‌ಎಲ್‌ ಪರೀಕ್ಷೆಗೆ ಕಳುಹಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ. ಆರೋಪಿಗಳ ವಿರುದ್ಧ ಇದು ಬಲವಾದ ಸಾಕ್ಷಿಯಾಗಿದ್ದು, ಕೇಸು ಮತ್ತಷ್ಟು ಬಲವಾದಂತಾಗಿದೆ.

ಆಗಸ್ಟ್ 14ರಂದು ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಬೆನ್ನಲ್ಲೇ ದರ್ಶನ್ ಮತ್ತು ಉಳಿದ ಆರೋಪಿಗಳನ್ನು ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಎಲ್ಲಾ ಆರೋಪಿಗಳ ಬಂಧನವನ್ನು ಆಗಸ್ಟ್ 28ರವರೆಗೆ ವಿಸ್ತರಣೆ ಮಾಡಲಾಗಿದೆ.


Spread the love

About Laxminews 24x7

Check Also

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 900 ಕೋಟಿ ರೂ. ಬಾಕಿ ಬರಬೇಕಿದೆ: ಶಾಸಕ ರಾಜು ಕಾಗೆ

Spread the loveಚಿಕ್ಕೋಡಿ: ಶಕ್ತಿ ಯೋಜನೆ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೂ ನಿಗಮಕ್ಕೆ 900 ಕೋಟಿ ರೂಪಾಯಿ ಬಾಕಿ ಹಣ ಬರಬೇಕಿದೆ. ಈ ಬಾಕಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ