ಬೆಂಗಳೂರು, : ಬೆಂಗಳೂರು ಮಳೆ(Bengaluru Rain) ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಸಿಎಂ ಸಿದ್ದರಾಮಯ್ಯ (Siddaramaiah) ಅವರು, ‘ಬೆಂಗಳೂರು ನಗರದಲ್ಲಿಕಂಟ್ರೋಲ್ ರೂಂ ಗಳನ್ನು ಗುರುತಿಸಲಾಗಿದೆ.
ದೊಡ್ಡ ಚರಂಡಿಗಳು ಓಪನ್ ಇರುವ ಸ್ಥಳಗಳನ್ನು ಗುರುತಿಸಿ ಮೊದಲೇ ಬಂದೋಬಸ್ತ್ ಮಾಡಲಾಗಿದೆ. ಇದರಿಂದ ಇದುವರೆಗೆ ಯಾವುದೇ ಸಾವು ನೋವು ಸಂಭವಿಸಿಲ್ಲ. ಇನ್ನು ರಾಜಕಾಲುವೆಗಳ ಒತ್ತುವರಿ ತೆರವು ಮಾಡಬೇಕು. ಜೊತೆಗೆ ಕೋಡಿಗೆ ಗೇಟ್ ಅಳವಡಿಸುವ ಮೂಲಕ ಮಳೆಗಾಲದಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ನಿಯಂತ್ರಿಸಿ ಪ್ರವಾಹ ತಡೆಗಟ್ಟಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರಿನಲ್ಲಿ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು, ಪ್ರತಿದಿನ ನಗರದ ಪರಿಸ್ಥಿತಿ ಕುರಿತು ಸಭೆ ನಡೆಸಿ ಪರಿಶೀಲಿಸಲು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚಿಸಿದರು.
ಇದೇ ವೇಳೆ ವಲಯ ಆಯುಕ್ತರ ಸಭೆ ನಡೆಸಿ, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಹಾಗೂ ಎಂಜಿನಿಯರ್ಗಳಿಗೆ ಜವಾಬ್ದಾರಿ ನಿಗದಿ ಪಡಿಸಿ. ಕರ್ತವ್ಯಲೋಪ ಎಸಗಿದರೆ, ಮುಲಾಜಿಲ್ಲದೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ಕೊಟ್ಟರು.
ಅಲ್ಲದೆ, ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದ ಸಂಸ್ಥೆಗಳಾದ ಬಿಡಿಎ, ಬಿಡಬ್ಲ್ಯುಎಸ್ಎಸ್ಬಿ, ಬಿಎಂಆರ್ಸಿಎಲ್, ಬಿಬಿಎಂಪಿ ಮೊದಲಾದವುಗಳ ನಡುವೆ ಸಮನ್ವಯ ವಹಿಸಲು ಹೇಳಿದರು.