ಮುಂಬೈ: ಬಾಲಿವುಡ್ ನ ಖ್ಯಾತ ನಟ ಎಂ.ಎಸ್.ಧೋನಿ ಸಿನಿಮಾ ನಾಯಕ ಸುಶಾಂತ್ ಸಿಂಗ್ ರಜಪೂತ್ (34) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮುಂಬೈ ಬಾಂದ್ರಾ ತಮ್ಮ ನಿವಾಸದಲ್ಲಿ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಖಾಸಗಿ ವಾಹಿನಿಯ ಪವಿತ್ರ ರಿಶ್ತಾ ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದ ಸುಶಾಂತ್, ಕೈ ಪೋ ಚೇ ಸಿನಿಮಾ ಮೂಲಕ ಬಾಲಿವುಡ್ ಪ್ರವೇಶಿಸಿದ್ದರು.
ತದನಂತರ ಬಿಡುಗಡೆಯಾಗಿದ್ದ ‘ಶುದ್ಧ್ ದೇಶಿ ರೊಮ್ಯಾನ್ಸ್’ ಸಿನಿಮಾದ ನಟನೆ ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಜೀವನಾಧರಿತ ಚಿತ್ರ ಸುಶಾಂತ್ ಸಿಂಗ್ ಗೆ ದೊಡ್ಡ ಮಟ್ಟದ ಯಶಸ್ಸು ತಂದು ಕೊಟ್ಟಿತ್ತು.
Laxmi News 24×7