Breaking News

ರಾಜ್ಯಾದ್ಯಂತ ಸಿಡಿದೆದ್ದ `ಕೈ’ ಕಾರ್ಯಕರ್ತರು : ರಾಜ್ಯಪಾಲರ ಭಾವಚಿತ್ರಕ್ಕೆ ಮಸಿ ಬಳಿದು ಆಕ್ರೋಶ!

Spread the love

ಮೈಸೂರು : ರಾಜ್ಯ ರಾಜಕೀಯದಲ್ಲಿ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

BREAKING : ರಾಜ್ಯಾದ್ಯಂತ ಸಿಡಿದೆದ್ದ `ಕೈ' ಕಾರ್ಯಕರ್ತರು : ರಾಜ್ಯಪಾಲರ ಭಾವಚಿತ್ರಕ್ಕೆ ಮಸಿ ಬಳಿದು ಆಕ್ರೋಶ!

ಮೈಸೂರು ಸೇರಿದಂತೆ ರಾಜ್ಯದ ಹಲವಡೆ ಮೋದಿ, ಶಾ ಸೇವಕನಾಗಿರುವ ಗೆಹ್ಲೋಟ್ ಗೆ ಧಿಕ್ಕಾರ ಎಂದು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು ಜಿಲ್ಲೆಯ ತಗಡೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿ ಭಾವಚಿತ್ರಕ್ಕೆ ಮಸಿ ಬಳಿದಿದ್ದಾರೆ. ಇನ್ನೂ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ, ಯಾದಗಿರಿ, ಬೆಂಗಳುರು ಸೇರಿದಂತೆ ರಾಜ್ಯದ ಹಲವಡೆ ಕಾಂಗ್ರೆಸ್ ಕಾರ್ಯಕರ್ತರು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದೆ


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ