Breaking News

ಏಕಾಂಗಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸಿಎಂ‌ ಸಿದ್ದರಾಮಯ್ಯನವರ ಅಭಿಮಾನಿ‌

Spread the love

ಯಾದಗಿರಿ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿದ ಕಾರಣಕ್ಕೆ ಯಾದಗಿರಿ ನಗರದಲ್ಲಿ‌ ಸಿದ್ದರಾಮಯ್ಯನವರ ಅಭಿಮಾನಿಯೊಬ್ಬ‌ ಏಕಾಂಗಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾನೆ

ನಗರದ ಸುಭಾಷ್ಚಂದ್ರ ಬೋಸ್ ವೃತ್ತದ ಬಳಿ ಸಿದ್ದರಾಮಯ್ಯನವರ ಅಭಿಮಾನಿ‌ ರಾಜಕುಮಾರ ಎಂಬಾತ ಏಕಾಂಗಿ ಉಪವಾಸ ಸತ್ಯಾಗ್ರಹ ಕುಳಿತಿದ್ದಾನೆ.

 

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ನಡೆಯನ್ನು ಖಂಡಿಸಿ ಸತ್ಯಾಗ್ರಹ ಕೈಗೊಂಡಿದ್ದು, ಬಿಜೆಪಿ ಹಾಗೂ‌ ಜೆಡಿಎಸ್ ನಾಯಕರು ರಾಜಭವನವನ್ನು ದುರುಪಯೋಗಿಸಿಕೊಂಡು ರಾಜ್ಯ ಮುಖ್ಯಮಂತ್ರಿಗಳ ತೆಜೋವಧೆ ಮಾಡುತ್ತಿದ್ದಾರೆ ಎಂದು ರಾಜಕುಮಾರ ಆರೋಪಿಸಿದರು.

ಉಪವಾಸ ಸತ್ಯಾಗ್ರಹಕ್ಕೆ ಮೂಲ ಕಾರಣ‌ ಸಿದ್ದರಾಮಯ್ಯನವರ ಸಾಹೇಬರ ಮೇಲಿನ ಅಭಿಮಾನ ಹಾಗೂ ಪ್ರೀತಿ, ಮುಡಾ ಪ್ರಕರಣದಲ್ಲಿ ನಮ್ಮ‌ ಸಿಎಂ ಅವರ ಪಾತ್ರವಿಲ್ಲ, ಅವರು‌ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ ಮುಖ್ಯಮಂತ್ರಿಗಳು ಎಂದು ಹೇಳಿದರು.

ಶೋಕಾಸ್ ನೋಟಿಸ್ ಹಿಂಪಡೆಯುವ ತನಕ ಅನಿರ್ಧಿಷ್ಟ ಉಪವಾಸ ಸತ್ಯಾಗ್ರಹವನ್ನು ಕೈಗೊಳ್ಳುತ್ತೇನೆ ಎಂದು ಎಚ್ಚರಿಕೆಯನ್ನು ‌ರಾಜಕುಮಾರ ನೀಡಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ