Breaking News

ಶತಮಾನ ಕಂಡ ಶಾಲೆ ಕಟ್ಟಡ ಧ್ವಂಸ ಮಾಡಿದ ಕಿಡಿಗೇಡಿಗಳು

Spread the love

ಹುಬ್ಬಳ್ಳಿ: ಇಲ್ಲಿನ ಗಿರಣಿಚಾಳದಲ್ಲಿರುವ ಶತಮಾನ ಕಂಡ ಶಾಲೆ ಕಟ್ಟಡವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ ಘಟನೆ ನಡೆದಿದೆ. ಇದು ಉದ್ದೇಶಪೂರ್ವಕವಾಗಿ ಮಾಡಿರುವ ಕೃತ್ಯವಾಗಿದ್ದು, ಜಾಗ ಕಬಳಿಸುವ ಹುನ್ನಾರವಾಗಿದೆ ಎಂದು ಸ್ಥಳೀಯರು ಪ್ರತಿಭಟನೆ ನಡೆಸಿದರು.

ಸುಮಾರು 135 ವರ್ಷಗಳ ಇತಿಹಾಸವುಳ್ಳ ಶಾಲೆಯಾಗಿದ್ದು, ಹಳೆ ಕಟ್ಟಡವನ್ನು ಕೆಡವಿದ್ದಾರೆ.

ತಡರಾತ್ರಿ ಕಿಡಿಗೇಡಿಗಳು ಕಟ್ಟಡ ಕೆಡವಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಕೆಡವಿರುವ ಕಟ್ಟಡದಲ್ಲಿ 4 ಮತ್ತು 5ನೇ ವರ್ಗದ ತರಗತಿಗಳು ನಡೆಯುತ್ತಿದ್ದವು.

ಬಾಗಿಲು ಹಾಗೂ ಗೋಡೆ ಭಾಗ ಕೆಡವಿದ್ದು, ತರಗತಿಗಳು ನಡೆಯದಂತಹ ಸ್ಥಿತಿ ನಿರ್ಮಾಣವಾಗಿದೆ. ಮಾಜಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಹಾಗೂ ಅವರ ತಂದೆ ಮತ್ತು ಮಾಜಿ ಶಾಸಕ‌ ವೀರಭದ್ರಪ್ಪ ಹಾಲರವಿ ಕಲಿತಿರುವ ಶಾಲೆ ಇದಾಗಿದೆ.


Spread the love

About Laxminews 24x7

Check Also

KRS ಡ್ಯಾಂಗೆ ಭಾಗಿನ ಅರ್ಪಣೆ ಮಾಡಿದ ಸಿಎಂ

Spread the loveಮಂಡ್ಯ: ರೈತರ ಜೀವನಾಡಿ ಕನ್ನಂಬಾಡಿ ಅಣೆಕಟ್ಟು ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕೆ.ಆರ್.ಎಸ್. ಜಲಾಶಯಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ