ಬೆಂಗಳೂರು : ಮುಂಬರುವ ಗಣೇಶ ಹಬ್ಬ ಆಚರಣೆ ಸಂಬಂಧ ಶೀಘ್ರದಲ್ಲಿ ಗೈಡ್ಲೈನ್ಸ್ ಪ್ರಕಟಿಸುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದರು.
ಇಂದು ಗಣೇಶ ಚತುರ್ಥಿ ಆಚರಣೆ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬಿಬಿಎಂಪಿ ಮತ್ತು ಬೆಂಗಳೂರು ನಗರ ಪೊಲೀಸ್ ಜಂಟಿ ಸಹಯೋಗದಲ್ಲಿ ಟೌನ್ ಹಾಲ್ ನಲ್ಲಿ ನಡೆದ ಶಾಂತಿ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ಪೀಕರ್, ಪೆಂಡಾಲ್ ಮೆರವಣಿಗೆಯ ಬಗ್ಗೆ ಗೈಡ್ಲೈನ್ಸ್ ಪ್ರಕಟಿಸುತ್ತೇವೆ ಎಂದು ತಿಳಿಸಿದರು.
ಸಾರ್ವಜನಿಕರಿಗೆ ತೊಂದರೆ ಆಗದಂತೆ ಹಾಗೂ ಟ್ರಾಫಿಕ್ ಆಗದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಬೆಂಗಳೂರಿನ ಸೂಕ್ಷ್ಮ ಪ್ರದೇಶಗಳಲ್ಲಿ ಎಚ್ಚರ ವಹಿಸುವ ಕೆಲಸ ಆಗುತ್ತಿದೆ. ಅಲ್ಲದೆ ರೌಡಿಶೀಟರ್ ಗಳ ಬಗ್ಗೆಯೂ ಗಮನಹರಿಸುತ್ತೇವೆ.ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯ 63 ಉಪ ವಿಭಾಗ ಕಛೇರಿಗಳಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗುಗುವುದು ಎಂದು ತಿಳಿಸಿದರು.