Breaking News

ಕುಮಾರಸ್ವಾಮಿ ಅರೆಸ್ಟ್‌ ಮಾಡೋಕೆ ಒಬ್ಬ ಪೊಲೀಸ್‌ ಕಾನ್‌ಸ್ಟೆಬಲ್‌ ಸಾಕು, 100 ಸಿದ್ದರಾಮಯ್ಯ ಯಾಕೆ ಬೇಕು?: ಸಿಎಂ

Spread the love

ಲಮಟ್ಟಿ: ಹೆಚ್.ಡಿ.ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಅವರು ಬುಧವಾರ ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

 

ನೂರು ಸಿದ್ದರಾಮಯ್ಯ ಬಂದರೂ ನನ್ನ‌ ಅರೆಸ್ಟ್ ಮಾಡೋಕೆ ಆಗಲ್ಲ ಎಂದ ಕುಮಾರಸ್ವಾಮಿಯವರ ಮಾತಿನ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅವರನ್ನು ಬಂಧಿಸೋಕೆ ನಾನು ಬೇಡ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ತಿರುಗೇಟು ನೀಡಿದರು.

 

 

ಯಾರನ್ನಾದರೂ ಬಂಧಿಸುವುದು ಪೊಲೀಸ್ ಇಲಾಖೆಯವರೇ ಹೊರತು ನಾನಲ್ಲ. ಕುಮಾರಸ್ವಾಮಿ ಅವರು ಹೆದರಿರುವ ಕಾರಣಕ್ಕಾಗಿ ಇಂದು ಪತ್ರಿಕಾಗೋಷ್ಠಿಯನ್ನು ಮಾಡಿದ್ದಾರೆ. ಪ್ರಕರಣದ ಸಮಗ್ರ ತನಿಖೆಗೆ ಆಯೋಗವನ್ನು ರಚಿಸಲಾಗಿದ್ದು, ಸತ್ಯ ಹೊರಬೀಳುತ್ತದೆ. ಕುಮಾರಸ್ವಾಮಿ ಹೇಳುವುದು ಸತ್ಯವೇ ಎಂಬುವುದು ತನಿಖೆಯಿಂದ ಸ್ಪಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಯಾವುದೇ ವಿಚಾರಣೆ ನಡೆದಿಲ್ಲ, ವರದಿಯಾಗಲಿ, ಪತ್ರವಾಗಲಿ ಅಥವಾ ಆದೇಶವಾಗಲಿ ಇಲ್ಲ. ಆ ಅವಧಿಯಲ್ಲಿ ಪ್ರಭಾವ ಬೀರಲು ನಾನು ಸಿಎಂ ಅಥವಾ ಮಂತ್ರಿಯಾಗಿರಲಿಲ್ಲ. ಕುಮಾರಸ್ವಾಮಿಯವರು ಯಾವತ್ತಿದ್ದರೂ ಹಿಟ್ ಅಂಡ್ ರನ್ ಮಾಡುವವರು, ವಿಧಾನಸಭಾ ಅಧಿವೇಶನ ಸಂದರ್ಭ ದಲ್ಲಿ ತನ್ನ ಬಳಿ ‘ಪೆನ್ ಡ್ರೈವ್’ ಇದೆ ಎಂದರು, ಆದರೆ ಅವರು ಇದುವರೆಗೆ ಮಾಡಿರುವ ಯಾವುದೇ ಆರೋಪಗಳಿಗೆ ತಾರ್ಕಿಕ ಅಂತ್ಯ ಕಂಡಿಲ್ಲ. ತನ್ನ ಬಳಿ ದಾಖಲೆಗಳಿವೆ ಎನ್ನುವ ಕುಮಾರಸ್ವಾಮಿಯವರು, ಅವುಗಳನ್ನು ಬಿಡುಗಡೆ ಮಾಡಬೇಕು.

ಸಿದ್ದರಾಮಯ್ಯನವರು ದಾಖಲಾತಿಗಳನ್ನು ತಿದ್ದಿದ್ದಾರೆ ಎಂದು ಕುಮಾರಸ್ವಾಮಿಯವರು ಆರೋಪಿಸಿರುವ ಬಗ್ಗೆ ಉತ್ತರಿಸಿ, ನಾನು ಯಾವುದೇ ದಾಖಲಾತಿಗಳನ್ನು ತಿದ್ದಿಲ್ಲ. 2014 ರ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿಲ್ಲ. 2021 ರಲ್ಲಿ ಸಲ್ಲಿಸಿದ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿದೆ. ಅಂದು ಮುಡಾ ಮಂಡಳಿ ಅಧ್ಯಕ್ಷರಾಗಿದ್ದವರು ಬಿಜೆಪಿಯವರು. ಆಗ ಮಂಡಳಿಯಲ್ಲಿದ್ದವರು ಬಿಜೆಪಿ ಹಾಗೂ ಜೆಡಿಎಸ್ ನವರು , ಆಗ ಆದ ನಿವೇಶನ ಹಂಚಿಕೆಗೆ ಯಾರು ಜವಾಬ್ದಾರರು. ಈ ಬಗ್ಗೆ ಆಯೋಗವನ್ನು ರಚಿಸಲಾಗಿದ್ದು, ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.


Spread the love

About Laxminews 24x7

Check Also

ಕಳ್ಳರನ್ನು ಓಡಿಸಲು ದಿಟ್ಟತನ ಮೆರೆದ ಮಹಿಳೆ ಪೃಥ್ವಿ ಸಮಯ ಪ್ರಜ್ಞೆಯಿಂದ ಜಿರಲೆ ಸ್ಪ್ರೇ ಸಿಂಪಡಿಸಿ ಕಳ್ಳರನ್ನು ಓಡಿಸಿದ ಮಹಿಳೆ…!!!

Spread the love ಕಳ್ಳರನ್ನು ಓಡಿಸಲು ದಿಟ್ಟತನ ಮೆರೆದ ಮಹಿಳೆ ಪೃಥ್ವಿ ಸಮಯ ಪ್ರಜ್ಞೆಯಿಂದ ಜಿರಲೆ ಸ್ಪ್ರೇ ಸಿಂಪಡಿಸಿ ಕಳ್ಳರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ