ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆಸೆಟ್- 2024) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಆಗಸ್ಟ್ 28ರವರೆಗೆ ವಿಸ್ತರಿಸಿದೆ.
‘ಅರ್ಜಿ ಸಲ್ಲಿಸಲು ಆಗಸ್ಟ್ 22 ಕೊನೆ ದಿನವಾಗಿತ್ತು.
ಅಭ್ಯರ್ಥಿಗಳ ಕೋರಿಕೆ ಮೇರೆಗೆ ದಿನಾಂಕ ವಿಸ್ತರಿಸಲಾಗಿದೆ. ಶುಲ್ಕ ಪಾವತಿಸಲು ಆ. 30ರವರೆಗೆ ಅವಕಾಶ ನೀಡಲಾಗಿದೆ’ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
Laxmi News 24×7