Breaking News

ಜಿಎಸ್‌ಟಿಯಲ್ಲಿ ಬದಲಾವಣೆ: ಉದ್ಯಮಿಗಳಿಗೆ ಜಾಗೃತಿ

Spread the love

ಹುಬ್ಬಳ್ಳಿ: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ತೆರಿಗೆ ಸಮಿತಿಯಿಂದ ಸರಕು ಮತ್ತು ಸೇವಾ ತೆರಿಗೆಯಲ್ಲಿ (ಜಿಎಸ್‌ಟಿ) ಇತ್ತೀಚಿನ ಬದಲಾವಣೆ ಕುರಿತ ವಿಚಾರ ಸಂಕಿರಣವನ್ನು ಸಂಸ್ಥೆಯ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿತ್ತು.

ಲೆಕ್ಕಪರಿಶೋಧಕ ಶಂಭುಲಿಂಗಪ್ಪ ಪಾಟೀಲ ಅವರು, ಆದಾಯ ತೆರಿಗೆ ಕಾಯ್ದೆಯ ತಿದ್ದುಪಡಿ, ಪರಿಷ್ಕೃತ ತೆರಿಗೆ ಪದ್ಧತಿ ಕುರಿತು ಮಾಹಿತಿ ನೀಡಿದರು.

ಲೆಕ್ಕಪರಿಶೋಧಕ ಕಿರಣ್‌ ಶಾವಿ ಅವರು, ಜಿಎಸ್‌ಟಿ ಕಾಯ್ದೆಯಲ್ಲಿನ ಬದಲಾವಣೆ ಬಗ್ಗೆ ತಿಳಿಸಿದರು. ಉದ್ದಿಮೆದಾರರೊಂದಿಗೆ ಸಂವಾದ ನಡೆಯಿತು.

ಸಂಸ್ಥೆಯ ಅಧ್ಯಕ್ಷ ಎಸ್‌.ಪಿ. ಸಂಶಿಮಠ, ತೆರಿಗೆ ಸಮಿತಿ ಅಧ್ಯಕ್ಷ ಕಾರ್ತಿಕ ಶೆಟ್ಟಿ, ಗೌರವ ಕಾರ್ಯದರ್ಶಿ ರವೀಂದ್ರ ಎಸ್‌. ಬಳಿಗಾರ ಹಾಜರಿದ್ದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ