Breaking News

ಮುಂದಿನ 4 ದಿನ ಕರಾವಳಿ, ಉ.ಕ.ದಲ್ಲಿ ಮಳೆ

Spread the love

ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ವ್ಯಾಪ್ತಿಯ ಪ್ರದೇಶಗಳಲ್ಲಿ ತುಸು ಕುಂಠಿತವಾಗಿರುವ ಮಳೆ, ಕರಾವಳಿ, ಉತ್ತರ ಒಳನಾಡಿನಲ್ಲಿ ಮುಂದಿನ ನಾಲ್ಕೈದು ದಿನ ಬಿರುಸಾಗಿ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.

ಚಿಕ್ಕಮಗಳೂರಿನ ಮೂಡಗೆರೆ, ದಾವಣಗೆರೆ, ಗದಗ, ಹಾವೇರಿಯ ಹನುಮಾನಮಟ್ಟಿ, ಶಿವಮೊಗ್ಗದ ಆಗುಂಬೆ, ಯಾದಗಿರಿ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಗುರುವಾರ ವರ್ಷಧಾರೆಯಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಆ.23ರಿಂದ ಆ.25ರವರೆಗೆ, ಬಾಗಲಕೋಟೆ, ಬೆಳಗಾವಿ, ಬೀದರ್​, ವಿಜಯಪುರದಲ್ಲಿ ಆ.23ರಂದು ಭಾರಿ ಪ್ರಮಾಣದಲ್ಲಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಇಲಾಖೆ ಯೆಲ್ಲೋ ಅರ್ಲಟ್​ ಕೊಟ್ಟಿದೆ. ಬೆಂಗಳೂರು, ಬೆಂ. ಗ್ರಾಮಾಂತರ, ಕೊಡಗು,ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಸಾಧಾರಣ ಮಳೆ ಸುರಿಯಲಿದೆ.


Spread the love

About Laxminews 24x7

Check Also

ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿದ ಸಚಿವ ಕೆ.ಜೆ. ಜಾರ್ಜ್

Spread the loveಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ದಾರುಣ ಘಟನೆ ಜಿಲ್ಲೆಯಾದ್ಯಂತ ಶೋಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ