ರಾಣೆಬೆನ್ನೂರು: ಅತೀ ಹೆಚ್ಚು ಮಳೆಯಾದ ಸಂದರ್ಭದಲ್ಲಿ ಮಣ್ಣಿನಲ್ಲಿ ನೀರಿನ ಜೊತೆ ಪೋಷಕಾಂಶಗಳು ಕೊಚ್ಚಿಕೊಂಡು ಹೋಗುತ್ತವೆ. ಆಗ ಸಸ್ಯಗಳಲ್ಲಿ ಪೋಷಕಾಂಶಗಳ ಕೊರತೆ ಹೆಚ್ಚಾಗಿ ಬೆಳೆಗಳು ಕೀಟ ಹಾಗೂ ರೋಗಕ್ಕೆ ತುತ್ತಾಗುತ್ತದೆ ಎಂದು ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಜ್ಞಾನಿ ರಶ್ಮಿ ಸಿ.ಎಂ. ಹೇಳಿದರು.
ತಾಲ್ಲೂಕಿನ ರಾಹುತನಕಟ್ಟಿ ಗ್ರಾಮದಲ್ಲಿ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಿಂದ ನಿಕ್ರಾ ಯೋಜನೆ ಅಡಿಯಲ್ಲಿ ಗುರುವಾರ ಮಣ್ಣು ಹಾಗೂ ನೀರಿನ ಸಂರಕ್ಷಣಾ ಕ್ರಮಗಳ ಕುರಿತು ಹೊರ ಆವರಣ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಖುಷ್ಕಿ ಭೂಮಿಯಲ್ಲಿ ನೀರು ನಿಲ್ಲಿಸಿ ಕೆಸರು ಗದ್ದೆ ಮಾಡಿ ಭತ್ತ ಬಿತ್ತನೆ ಮಾಡುವುದನ್ನು ನಿಲ್ಲಿಸಿ ಕೂರಿಗೆ ಅಥವಾ ನೇರ ಬಿತ್ತನೆಗೆ ಒತ್ತು ಕೊಡಬೇಕು ಎಂದರು.