Breaking News

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 70 ವರ್ಷದ ಮುದಿಗೂಬೆ,

Spread the love

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 70 ವರ್ಷದ ಮುದಿಗೂಬೆ ಅರೆಸ್ಟ್ !

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. 70 ವರ್ಷದ ಅಸೀಫ್ ಭಾಗವಾನ್ ಎಂಬ ವೃದ್ಧ, 10 ರೂ. ಆಮಿಷ ತೋರಿಸಿ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾನೆ.

ಆರೋಪಿಯು ಬಾಲಕಿಯ ಅಂಗಾಂಗಗಳನ್ನು ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ ಘಟನೆ ನಂತರ, ಬಾಲಕಿ ಈ ವಿಚಾರವನ್ನು ಪೋಷಕರಿಗೆ ತಿಳಿಸಿದ್ದಾಳೆ. ಪೋಷಕರಿಂದ ಮಾಹಿತಿ ಪಡೆದ ಸ್ಥಳೀಯರು, ಅಸೀಫ್‌ ಗೆ ಧರ್ಮದೇಟು ನೀಡಿದ್ದು, ತಕ್ಷಣವೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ನಿಪ್ಪಾಣಿ ಶಹರ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ