Breaking News

ಶಾಸಕರ ಹೆಸರಲ್ಲಿ ನಕಲಿ ಸಹಿ, ಲೆಟರ್ ಹೆಡ್ ಸೃಷ್ಟಿಸಿ ವಂಚನೆ: ಇಬ್ಬರು ಆರೋಪಿಗಳು ಅರೆಸ್ಟ್

Spread the love

ಬೆಂಗಳೂರು: ಶಾಸಕರ ಹೆಸರಲ್ಲಿ ನಕಲಿ ಸಹಿ, ಲೆಟರ್ ಹೆಡ್ ಸೃಷ್ಟಿಸಿ ವಿಧನಸೌಧದಲ್ಲಿ ಕೆಲಸ ಕೊಡಿಸುರುವ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂದ್ಜಿಸಿದ್ದಾರೆ.

ರಾಮನಗರದ ಸ್ವಾಮಿ (35) ಹಾಗೂ ಅಂಜನ್ ಕುಮಾರ್ (25) ಬಂಧಿತ ಆರೋಪಿಗಳು. ಸ್ವಾಮಿ ವಿಧಾನಸೌಧದಲ್ಲಿ ಇ ಹಿಂದೆ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ.

BIG NEWS: ಶಾಸಕರ ಹೆಸರಲ್ಲಿ ನಕಲಿ ಸಹಿ, ಲೆಟರ್ ಹೆಡ್ ಸೃಷ್ಟಿಸಿ ವಂಚನೆ: ಇಬ್ಬರು ಆರೋಪಿಗಳು ಅರೆಸ್ಟ್; ತನಿಖೆಯಲ್ಲಿ ಮತ್ತಷ್ಟು ಪ್ರಕರಣ ಬಯಲು

ಬಳಿಕ ಕೆಲಸ ಬಿಟ್ಟು ರಾಜಕಾರಣಿಗಳ ಜೊತೆ ಓಡನಾಟ ಬೆಳೆಸಿಕೊಂಡಿದ್ದ. ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಕಲಿ ಲೆಟರ್ ಹೆಡ್ ಸೃಷ್ಟಿಸಿ, ನಕಲಿ ಸಹಿ ಮಾಡಿ ವಿಧನಸೌಧ ಸಚಿವಾಲಯಕ್ಕೆ ಪತ್ರ ಬರೆದು ಪತ್ನಿ ವಿನುತಾ ಹಾಗೂ ಅಂಜನ್ ಎಂಬುವವರಿಗೆ ಶಸಕರ ಆಪ್ತ ಸಹಾಯಕ ಹುದ್ದೆ ಕೊಡಿಸಿದ್ದನು.

ನಕಲಿ ಲೆಟರ್ ಹೆಡ್ ನಂಬಿದ ವಿಧಾನಸೌಧ ಸಚಿವಾಲಯದ ಸಿಬ್ಬಂದಿಗಳು ವಿನುತಾಳಿಗೆ 2023ರ ಮೇನಲ್ಲಿ ಕೆಲಸ ನೀಡಿದ್ದರು. ಬಳಿಕ ವಿನುತಾ ಕೆಲಸಕ್ಕೆ ಬಾರದೇ ತಿಂಗಳಿಗೆ 30 ಸಾವಿರ ಸಂಬಳ ಪಡೆದಿದ್ದಾಳೆ. ವಿಚರಿಸಿದಾಗ ಗರ್ಭಿಣಿಯಾಗಿರುವುದರಿಂದ ಕೆಲಸದಿಂದ ಬಿಡುಗಡೆ ಮಾಡುವ್ಂತೆ ಪತ್ರ ಬರೆದಿದ್ದಳು. ಅನುಮಾನಗೊಂಡು ತನಿಖೆ ನಡೆಸಿದಾಗ ಪ್ರಕರನ ಬೆಳಕಿಗೆ ಬಂದಿದೆ.


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ