ಮುಧೋಳ : ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಹಿನ್ನೆಲೆ ನಗರಸಭೆ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಮಧ್ಯಾಹ್ನ ಎರಡು ಗಂಟೆ ವೇಳೆಗೆ ಆಯ್ಕೆಪ್ರಕ್ರಿಯೆ ಪೂರ್ಣಗೊಳ್ಳಲಿದೆ.
ಮುಂಜಾಗೃತ ಕ್ರಮವಾಗಿ ನಗರಸಭೆ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಸೂಕ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಜಿದ್ದಾಜಿದ್ದಿನ ಕಾಳಗಕ್ಕೆ ಸಿದ್ದವಾಗಿರುವ ನಗರಸಭೆ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಕೈ-ಕಮಲ ಪಡೆಗಳ ಮುಖಂಡರು ತೀವ್ರ ಕಸರತ್ತು ನಡೆಸಿದ್ದಾರೆ.