Breaking News

ದರ್ಶನ್‌ ನ್ನು ಪರಪ್ಪನ ಅಗ್ರಹಾರದಿಂದ ಬೇರೆಡೆ ಸ್ಥಳಾಂತರಿಸುವ ಆಲೋಚನೆ :ಸಿದ್ದರಾಮಯ್ಯ

Spread the love

ಬೆಳಗಾವಿ: ‘ಕೊಲೆ ಆರೋಪಿ, ನಟ ದರ್ಶನ್‌ ಅವರನ್ನು ಪರಪ್ಪನ ಅಗ್ರಹಾರದಿಂದ ಬೇರೆಡೆ ಸ್ಥಳಾಂತರಿಸುವ ಆಲೋಚನೆ ನಡೆದಿದೆ. ಅಧಿಕಾರಿಗಳ ಮಟ್ಟದಲ್ಲಿ ನಿರ್ಧಾರ ಮಾಡುತ್ತಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಮೀಪದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಬೇಕೋ, ಬೇರೆಡೆ ಕಳಿಸಬೇಕೋ ಎಂಬುದನ್ನು ಇನ್ನೂ ನಿರ್ಧರಿಸಿಲ್ಲ’ ಎಂದರು.

 

ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿದ ವಿಚಾರವಾಗಿ ಏಳು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಗೃಹಸಚಿವ ಡಾ.ಜಿ.ಪರಮೇಶ್ವರ ಅವರು ಖುದ್ದು ಪರಿಶೀಲನೆ ನಡೆಸಲಿದ್ದಾರೆ. ಇನ್ನೂ ಯಾರ್‍ಯಾರ ಮೇಲೆ ಕ್ರಮ ಜರುಗಿಸಬೇಕೋ ಅದನ್ನು ಮಾಡುತ್ತೇವೆ’ ಎಂದರು.


Spread the love

About Laxminews 24x7

Check Also

ಬಜೆಟ್‌ನಲ್ಲಿ ಲೋಕೋಪಯೋಗಿ ಇಲಾಖೆಗೆ ಹೆಚ್ಚಿನ ಹಣ ನೀಡಿಲ್ಲ : ಸಚಿವ ಸತೀಶ್‌ ಜಾರಕಿಹೊಳಿ

Spread the loveಬೆಂಗಳೂರು: ಸೇತುವೆಗಳ ನಿರ್ಮಾಣ ಹಾಗೂ ಇತರ ಕಾಮಗಾರಿಗಳನ್ನು ಒಳಗೊಂಡು ಲೋಕೋಪಯೋಗಿ ಇಲಾಖೆಗೆ ಬಜೆಟ್‌ನಲ್ಲಿ ಹೆಚ್ಚಿನ ಹಣ ನೀಡಿರುವುದರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ