Breaking News

KAS’ ಪೂರ್ವಭಾವಿ ಪರೀಕ್ಷೆ : ಬೆಳಗಾವಿಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎಂದು ಪರೀಕ್ಷಾರ್ಥಿಗಳ ಪ್ರತಿಭಟನೆ!

Spread the love

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ ಇಂದು ನಡೆಯುತ್ತಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂದು ಆರೋಪಿಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

 

ಬೆಳಗಾವಿಯ ಅಂಜುಮನ್ ಕಾಲೇಜಿನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಅಲ್ಲದೇ ಪ್ರಶ್ನೆ ಪತ್ರಿಕೆ ಕೊಡಲು 15 ನಿಮಿಷ ತಡ ಮಾಡಲಾಗಿದೆ. ಒಎಂಆರ್ ಶೀಟ್ ಕೂಡ ಅದಲು ಬದಲಾಗಿದೆ ಎಂದು ಅಭ್ಯರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.

ವಿಚಾರ ತಿಳಿದ ಕೂಡಲೇ ಬೆಳಗಾವಿ ಜಿಲ್ಲಾ‍ಧಿಕಾರಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪರೀಕ್ಷೆ ಬರೆಯಲು ಹೆಚ್ಚುವರಿ ಸಮಯ ಕೊಡುತ್ತೇವೆ ಎಂದು ಹೇಳಿದ ಬಳಿಕ ಪರೀಕ್ಷೆ ಆರಂಭವಾಗಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ