Breaking News

ಎರಡು ದಶಕಗಳಿಂದ ಬಿಜೆಪಿ ಆಡಳಿತದಲ್ಲಿದ್ದ ಯಲ್ಲಮ್ಮ ಪುರಸಭೆ ಕಾಂಗ್ರೆಸ್ ತೆಕ್ಕೆಗೆ

Spread the love

ವದತ್ತಿ: ಎರಡು ದಶಕಗಳಿಂದ ಬಿಜೆಪಿ ಆಡಳಿತದಲ್ಲಿದ್ದ ಯಲ್ಲಮ್ಮ ಪುರಸಭೆ ಇದೀಗ ಶಾಸಕ ವಿಶ್ವಾಸ್ ವೈದ್ಯ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ತೆಕ್ಕೆಗೆ ಮರಳಿದೆ. ಹಲವು ತಿಂಗಳಿಂದ ತೆರವಾಗಿದ್ದ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಮಂಗಳವಾರ ಆಯ್ಕೆಯಾದರು.

 

2ನೇ ಅವಧಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ ಮೀಸಲಾತಿ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಚಿನ್ನವ್ವ ಹುಚ್ಚಣ್ಣವರ, ಉಪಾಧ್ಯಕ್ಷ ಸ್ಥಾನಕ್ಕೆ ದಾವಲಬಿ ಸನದಿ ಅವರು ನಾಮಪತ್ರ ಸಲ್ಲಿಸಿದ್ದರು.

ಶಾಸಕರು, ಸಂಸದರು ಹಾಗೂ 27 ಸದಸ್ಯ ಬಲದ ಮತದಾನದಲ್ಲಿ ಸಂಸದ ಸೇರಿ ನಾಲ್ವರು ಗೈರು ಹಾಜರಾಗಿದ್ದರು. ನಿಗದಿತ ಅವಧಿಯಲ್ಲಿ ಬೇರೆ ನಾಮಪತ್ರ ಸಲ್ಲಿಕೆಯಾಗದ ಕಾರಣ ನಾಮಪತ್ರ ಸಲ್ಲಿಸಿದ್ದ ಚಿನ್ನವ್ವ ಹುಚ್ಚಣ್ಣವರ ಅವರನ್ನು ಅಧ್ಯಕ್ಷರನ್ನಾಗಿ, ದಾವಲಬಿ ಸನದಿ ಅವರನ್ನು ಉಪಾಧ್ಯಕ್ಷರನ್ನಾಗಿ ಅವಿರೋಧ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ತಹಶೀಲ್ದಾರ್‌ ಎಂ.ಎನ್. ಹೆಗ್ಗನ್ನವರ ಘೋಷಿಸಿದರು.

ಶಾಸಕ ವಿಶ್ವಾಸ್ ವೈದ್ಯ ಮಾತನಾಡಿ, ‘ಶಾಸಕನಾದ ಬಳಿಕ ಪುರಸಭೆಯ ಆಡಳಿತವನ್ನು ಕಾಂಗ್ರೆಸ್ ಪಕ್ಷ ತನ್ನ ಮುಡಿಗೇರಿಸಿಕೊಂಡಿದೆ. ಎರಡು ದಶಕಗಳಿಂದ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ಪಕ್ಷ ಇದೀಗ ಅಧಿಕಾರಕ್ಕೇರಿದೆ. ಇದು ಕಾರ್ಯಕರ್ತರಿಗೆ ಹಾಗೂ ವೈಯಕ್ತಿಕವಾಗಿ ಅತೀವ ಸಂತಸ ತಂದಿದೆ. ಯಲ್ಲಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಪುನಃಶ್ಚೇತನಗೊಳಿಸಿ ಎಲ್ಲ ಆಡಳಿತದಲ್ಲಿಯೂ ಪಕ್ಷವನ್ನು ಆಡಳಿತಕ್ಕೆ ತರಲಾಗುವುದು. ಇದೇ ಉತ್ಸಾಹದಿಂದ ಕಾರ್ಯಕರ್ತರು ಮುಂಬರುವ ಚುನಾವಣೆಗಳಲ್ಲಿ ವಿಜಯ ಗಳಿಸಲಿ. ನೂತನ ಅಧ್ಯಕ್ಷ, ಉಪಾಧ್ಯಕ್ಷರು ನಗರದ ಅಭಿವದ್ಧಿಯತ್ತ ಗಮನಹರಿಸಬೇಕು. ಜನರ ಆಶೋತ್ತರಗಳಿಗೆ ಧ್ವನಿಯಾಗಬೇಕು’ ಎಂದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ