Breaking News

ಪಾಸ್ ಪೋರ್ಟ್ ಸೇವಾ ಪೋರ್ಟಲ್ ಆ. 29 ರಿಂದ ಸೆಪ್ಟೆಂಬರ್ 2ರವರೆಗೆ ಸ್ಥಗಿತ

Spread the love

ವದೆಹಲಿ: ಪಾಸ್‌ಪೋರ್ಟ್ ಸೇವಾ ಪೋರ್ಟಲ್ ನಾಳೆ ಆಗಸ್ಟ್ 29 ರಂದು ರಾತ್ರಿ 8 ರಿಂದ ಸೆಪ್ಟೆಂಬರ್ 2 ರಂದು ಬೆಳಗ್ಗೆ 6 ಗಂಟೆಯವರೆಗೆ ತಾಂತ್ರಿಕ ನಿರ್ವಹಣೆಗೆ ಕಾರಣದಿಂದ ನಾಗರಿಕರ ಸೇವೆಗೆ ಲಭ್ಯವಿರುವುದಿಲ್ಲ.

ಈ ಅವಧಿಯಲ್ಲಿ ನಾಗರಿಕರಿಗೆ ಹಾಗೂ ಎಲ್ಲಾ ಎಂಇಎ, ಆರ್​ಪಿಒ, ಬಿಒಐ, ಡಿಒಪಿ, ಪೊಲೀಸ್ ಪ್ರಾಧಿಕಾರಗಳಿಗೆ ಸಿಸ್ಟಂ ಲಭ್ಯ ಇರುವುದಿಲ್ಲ.

ಆಗಸ್ಟ್ 30ಕ್ಕೆ ಬುಕ್ ಆಗಿರುವ ಅಪಾಯಿಂಟ್​ಗಳನ್ನು ಬೇರೆ ದಿನಕ್ಕೆ ನಿಗದಿ ಮಾಡಿ, ಅರ್ಜಿದಾರರಿಗೆ ಅದರ ಮಾಹಿತಿ ಅಪ್​ಡೇಟ್ ಮಾಡಲಾಗುತ್ತದೆ,’ ಎಂದು ಅಡ್ವೈಸರಿ ಬಿಡುಗಡೆ ಮಾಡಲಾಗಿದೆ.

 

 

ದೃಢೀಕೃತ ಅಪಾಯಿಂಟ್‌ಮೆಂಟ್‌ಗಳನ್ನು ಹೊಂದಿರುವ ಅರ್ಜಿದಾರರು ತಮ್ಮ ಮರುನಿಗದಿಪಡಿಸಿದ ಅಪಾಯಿಂಟ್‌ಮೆಂಟ್‌ಗಳ ಕುರಿತು SMS ಅಧಿಸೂಚನೆಗಳನ್ನು ಸ್ವೀಕರಿಸುತ್ತಾರೆ.ಅಪಾಯಿಂಟ್ಮೆಂಟ್ ಪಡೆದಿರುವ ಅಭ್ಯರ್ಥಿಗಳಿಗೆ ಮುಂದಿನ ದಾರಿಗಳ ಬಗ್ಗೆ ಎಸ್ಸೆಮ್ಮೆಸ್ ಮೂಲಕ ಮಾಹಿತಿ ನೀಡಲಾಗುತ್ತದೆ ಎಂದು ಪಾಸ್​ಪೋರ್ಟ್ ಇಲಾಖೆ ಹೇಳಿದೆ.

ಪಾಸ್​ಪೋರ್ಟ್ ಸೇವಾ ಪೋರ್ಟಲ್ ಮಾತ್ರವಲ್ಲ, ವಿವಿಧೆಡೆ ಇರುವ ಪಾಸ್​ಪೋರ್ಟ್ ಸೇವಾ ಕೇಂದ್ರಗಳೂ ಆಗಸ್ಟ್ 30ರಂದು ಬಂದ್ ಆಗಿರುತ್ತವೆ. ಹೀಗಾಗಿ, ಶುಕ್ರವಾರಕ್ಕೆ ಅಪಾಯಿಂಟ್ಮೆಂಟ್ ಪಡೆದಿರುವ ಅರ್ಜಿದಾರರಿಗೆ ಬೇರೆ ದಿನ ಅಪಾಯಿಂಟ್ಮೆಂಟ್ ಕೊಡಲಾಗುತ್ತಿದೆ.


Spread the love

About Laxminews 24x7

Check Also

ಈಗ 41 ದೇಶಗಳಿಂದ ಇಂಧನ ಅಮದು, ಗಲ್ಫ್‌ನಲ್ಲಿರುವ ಪ್ರತಿಯೊಬ್ಬ ಭಾರತೀಯನ ಸುರಕ್ಷತೆ ನಮಗೆ ಮುಖ್ಯ: ಮೋದಿ

Spread the loveದೆಹಲಿ: ಈಗ ನಾವು 41 ದೇಶಗಳಿಂದ ಇಂಧನವನ್ನು ಆಮದು ಮಾಡಿಕೊಳ್ಳುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ