Breaking News

ನೆಲಕ್ಕುರುಳಿದ ಛತ್ರಪತಿ ಶಿವಾಜಿ ಪ್ರತಿಮೆ

Spread the love

ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದ 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜ್‌ ಪ್ರತಿಮೆ ಸೋಮವಾರ ನೆಲಕ್ಕುರುಳಿದೆ.

ಇಂದು (ಸೋಮವಾರ) ಮಧ್ಯಾಹ್ನ 1 ಗಂಟೆಯ ಹೊತ್ತಿಗೆ ಸಿಂಧುದುರ್ಗ ಜಿಲ್ಲೆಯ ರಾಜ್‌ಕೋಟ್‌ ಕೋಟೆಯ ಬಳಿ ನಿರ್ಮಿಸಿದ್ದ ಪ್ರತಿಮೆ ನೆಲಕ್ಕುರುಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಜಿಲ್ಲೆಯಲ್ಲಿ ಮೂರು ದಿನಗಳಿಂದ ಭಾರಿ ಪ್ರಮಾಣದಲ್ಲಿ ಗಾಳಿ ಮಳೆಯಾಗುತ್ತಿದ್ದ ಕಾರಣ ಪ್ರತಿಮೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2023ರ ಡಿ.4 ರಂದು ನೌಕಾ ದಿನದ ಹಿನ್ನೆಲೆ, ಮಹಾರಾಷ್ಟ್ರಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಈ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಇದೀಗ ಕೇವಲ 9 ತಿಂಗಳಲ್ಲಿ ಪ್ರತಿಮೆ ಉರುಳಿ ಬಿದ್ದಿದೆ.

 

 


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ