Breaking News

ಗ್ರಾಮದಲ್ಲಿ ಎರಡು ನ್ಯಾಯ ಬೆಲೆ ಅಂಗಡಿ ತೆರಯಲು ಆಕ್ಷೇಪ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Spread the love

ಬೆಂಗಳೂರು: ದೇಶದ ನಾಗರೀಕರಿಗೆ ಅಗತ್ಯ ಸಾಮಗ್ರಿಗಳನ್ನು ಸುಲಭವಾಗಿ ಪೂರೈಕೆ ಮಾಡುವ ಉದ್ದೇಶದಿಂದ ನ್ಯಾಯಬೆಲೆ ಅಂಗಡಿಗಳು ಕಾರ್ಯಾಚರಿಸುತ್ತಿದೆ ಎಂದಿರುವ ಹೈಕೋರ್ಟ್, ಒಂದು ಗ್ರಾಮದಲ್ಲಿ ಮತ್ತೊಂದು ನ್ಯಾಯ ಬೆಲೆ ಅಂಗಡಿ ಆರಂಭಿಸುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

 

ಅಲ್ಲದೆ, ಪಡಿತರ ಚೀಟಿದಾರರಲ್ಲಿ ಅತಿ ಹೆಚ್ಚು ಜನರು ಸಮಾಜದಲ್ಲಿನ ಬಡ ವರ್ಗಕ್ಕೆ ಹಾಗೂ ಬಡತನ ರೇಖೆಗಿಂತ ಕೆಳಗಿನವರಿದ್ದಾರೆ ಎಂದು ಹೇಳಿದೆ.
ಪ್ರಕರಣ ಸಂಬಂಧ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಚಿಕ್ಕರೂಗಿ ಹಳ್ಳಿಯ ಮಹಾತ್ಮ ಗಾಂಧೀಜಿ ಗ್ರಾಮ ಹಿತ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ