Breaking News

ದರ್ಶನ್‌ ಗ್ಯಾಂಗ್‌ನ ಮೂವರು ಮೈಸೂರು ಜೈಲಗೆ ಶಿಫ್ಟ್!

Spread the love

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್ ಮತ್ತು ಸಹಚರರಿಗೆ ಹೊಸ ಸಂಕಷ್ಟ ಶುರುವಾಗಿದೆ. ನಟ ದರ್ಶನ್‌ಗೆ ರಾಜಾತಿಥ್ಯ ಸಿಕ್ಕ ಹಿನ್ನಲೆಯಲ್ಲೇ ದರ್ಶನ್ ಮತ್ತು ಸಹಚರರನ್ನು ರಾಜ್ಯದ ವಿವಿಧ ಜೈಲುಗಳಿಗೆ ಸ್ಥಳಾಂತರ ಮಾಡಲು ನ್ಯಾಯಾಲಯ ಆದೇಶ ನೀಡಿದೆ.

ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಿದ್ದು, ಮೈಸೂರು ಕಾರಾಗೃಹಕ್ಕೂ ಮೂವರು ಆರೋಪಿಗಳನ್ನು ಸ್ಥಳಾಂತರ ಮಾಡಲಾಗುತ್ತದೆ.

ಈ ಮೊದಲೇ ಮೂವರು ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ3 ಆರೋಪಿ ಪವನ್, ಎ4 ಆರೋಪಿ ರಾಘವೇಂದ್ರ, ಎ5 ಆರೋಪಿ ನಂದೀಶ್ ಸಹ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಇದೀಗ ದರ್ಶನ್ ಅವರ ಒಂದಷ್ಟು ಫೋಟೋಗಳು ವೈರಲ್ ಆಗುತ್ತಿದ್ದಂತೆ ಈ ಮೂವರನ್ನು ಮೈಸೂರು ಕಾರಾಗೃಹಕ್ಕೆ ಸ್ಥಳಾಂತರ ಮಾಡಲು ನಿರ್ಧರಿಸಲಾಗಿದೆ.

ಮೈಸೂರು ಕಾರಾಗೃಹದಲ್ಲಿ 20 ಬ್ಯಾರಕ್‌ಗಳಿದ್ದು, ಒಟ್ಟು 850 ಕೈದಿಗಳು ಇದ್ದಾರೆ. ಇದೀಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳು ಮೈಸೂರಿಗೆ ಬರುತ್ತಿರುವುದರಿಂದ. ಜೈಲಿನ ಅಧಿಕಾರಿಗಳು ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ