ಬೆಂಗಳೂರು : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳಾದ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಸವಿತಾ-ಸಮಾಜ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಅಲೆಮಾರಿ-ಅರೆಮಾರಿ ಅಭಿವೃದ್ಧಿ ನಿಗಮ (ನಿ)., ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮ (ನಿ) ಗಳಲ್ಲಿ ವಿವಿಧ ಯೋಜನೆಯಡಿಯಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ/ ಕಾಯಕ ಕಿರಣ/ಶಹಾಜೀರಾಜೆ ಸಮೃದ್ಧಿ ಯೋಜನೆ., ಗಂಗಾ ಕಲ್ಯಾಣ ನೀರಾವರಿ ಯೋಜನೆ/ ಜೀವಜಲ/ ಜೀಜಾವು ಜಲಭಾಗ್ಯ ಯೋಜನೆ., ಅರಿವು -ಶೈಕ್ಷಣಿಕ ಸಾಲ ಯೋಜನೆ., ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ., ಸ್ವಾವಲಂಬಿ ಸಾರಥಿ ಯೋಜನೆ., ಸ್ವಯಂ ಉದ್ಯೋಗಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ)., ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗೆ ವೆಬ್ ಸೈಟ್ https://www.kaushalkar.com ನಲ್ಲಿ ಅರ್ಜಿ ಸಲ್ಲಿಸಬಹುದು. ಹೊಲಿಗೆ ಯಂತ್ರ ವಿತರಣೆ ಯೋಜನೆ ( ದೇವರಾಜ ಅರಸು ನಿಗಮದ ವ್ಯಾಪ್ತಿಗೆ ಒಳಪಡುವ ಸಮುದಾಯದವರಿಗೆ)., ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು ಯೋಜನೆ (ವಿಶ್ವrಕರ್ಮ ಸಮುದಾಯದವರಿಗೆ ಮಾತ್ರ)., ಭೋಜನಾಲಯ ಕೇಂದ್ರ (ವೀರಶೈವ-ಲಿಂಗಾಯತ ಸಮುದಾಯದವರಿಗೆ)., ವಿಭೂತಿ ನಿರ್ಮಾಣ ಘಟಕ (ವೀರಶೈವ-ಲಿಂಗಾಯತ ಸಮುದಾಯದವರಿಗೆ). ಮತ್ತು ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ (ಮರಾಠ ಸಾಮುದಾಯದವರಿಗೆ)ಗಳ ಸಾಲ ಸೌಲಭ್ಯ ಪಡೆಯಬಹುದು