Breaking News

ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಉದ್ದೇಶ:ಹೆಬ್ಬಾಳಕರ

Spread the love

ಬೆಳಗಾವಿ: ರಾಜಭವನ ಸಂಪೂರ್ಣ ಒತ್ತಡದಲ್ಲಿ ಕೆಲಸ ಮಾಡುತ್ತಿದೆ. ದೇಶದಲ್ಲಿರುವ ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಆರೋಪಿಸಿದರು.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡಿರುವ ಆರೋಪಕ್ಕೆ ನ್ಯಾಯಾಲಯದಲ್ಲಿ ಉತ್ತರ ಸಿಗಲಿದೆ.Belagavi; ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರದ ಉದ್ದೇಶ:‌ ಹೆಬ್ಬಾಳ್ಕರ್

ಖಂಡಿತವಾಗಿಯೂ ನ್ಯಾಯಾಲಯದಲ್ಲಿ ಜಯ ಸಿಕ್ಕೇ ಸಿಗುತ್ತದೆ. ನ್ಯಾಯಾಂಗದ ಮೇಲೆ, ಭಾರತದ ಸಂವಿಧಾನದ ಮೇಲೆ ವಿಶ್ವಾಸವಿದೆ ಎಂದು ಹೇಳಿದರು.

ಕಾಂಗ್ರೆಸ್‌ ಎಂದೆಂದಿಗೂ ಬಡವರ ಪರ. ಬಡವರಿಗಾಗಿಯೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಆದರೆ ಕೇಂದ್ರ ಸರ್ಕಾರವೇ ಶ್ರೀಮಂತರ 16 ಲಕ್ಷ ಕೋಟಿ ರೂಪಾಯಿಯನ್ನು ಮನ್ನಾ ಮಾಡಿದೆ ಎಂದು ಹೆಬ್ಬಾಳ್ಕರ್‌ ಟೀಕೆ ಮಾಡಿದರು.


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ